Advertisement
ಮೈಸೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿ, ಇ.ಡಿ. ತನಿಖೆಯ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.
Related Articles
Advertisement
ಮುಸ್ಲಿಮರಿಗೆ ಮೀಸಲಾತಿ ನಿರ್ಧರಿಸಿಲ್ಲಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಹಾಗೂ ಈ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ತೀರ್ಮಾನವನ್ನು ಸರಕಾರ ತೆಗೆದುಕೊಂಡಿಲ್ಲ. ಬಿಜೆಪಿಯವರಿಗೆ ಕೋಮುವಾದವನ್ನು ಸೃಷ್ಟಿಸುವುದೇ ಕಾಯಕವಾಗಿದೆ ಎಂದು ಕಿಡಿಕಾರಿದರು. ಮೋದಿ ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ಸುದ್ದಿಗಾರರ ಜತೆ ಮಾತನಾಡಿ, ಆರೋಪ ಸಾಬೀತು ಮಾಡದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.