Advertisement

MUDA case: ಇ.ಡಿ.ಯಿಂದ ಲೋಕಾಯುಕ್ತಕ್ಕೆ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

03:29 PM Dec 04, 2024 | Team Udayavani |

ಮಂಡ್ಯ: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಲೋಕಾಯುಕ್ತ ಪೊಲೀಸರಿಗೆ ಇ.ಡಿ. ಇತ್ತೀಚೆಗೆ ಬರೆದಿರುವ ಪತ್ರ ರಾಜಕೀಯ ಪ್ರೇರಿತವಾಗಿದ್ದು, ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕಳುಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ(ಡಿ4) ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Advertisement

ಇಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ’ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ (ED) ಯಾವುದೇ ಅಧಿಕಾರವಿಲ್ಲ ಎಂದು ಮತ್ತೊಮ್ಮೆ ಪ್ರತಿಪಾದಿಸಿದರು.

”ನಾಳೆ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಹೈಕೋರ್ಟ್ ನ ವಿಭಾಗೀಯ ಪೀಠದ ಮುಂದೆ ನಮ್ಮ ರಿಟ್ ಮೇಲ್ಮನವಿ ಸಲ್ಲಿಸಲಿದ್ದು, ಇ.ಡಿ. ಕಾನೂನುಬದ್ಧವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಎರಡನೆಯದಾಗಿ, ಅವರು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಈ ರೀತಿ ಮಾಡಿದ್ದಾರೆ, ”ಎಂದು ಅವರು ಲೋಕಾಯುಕ್ತಕ್ಕೆ ಇ.ಡಿ. ಪತ್ರ ಬರೆದ ಕುರಿತಾಗಿನ ಪ್ರಶ್ನೆಗೆ ಸಿಎಂ ಪ್ರತಿಕ್ರಿಯಿಸಿದರು.

ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಅವರು ವರದಿ ಸಲ್ಲಿಸಬೇಕು. ಅವರ ಮೇಲೆ ಪ್ರಭಾವ ಬೀರಲು, ಪೂರ್ವಾಗ್ರಹ ಪೀಡಿತರನ್ನಾಗಿ ಮಾಡಲು ಇದನ್ನು ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ಆಗಿದೆ” ಎಂದು ಸಿಎಂ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next