ಬೆಂಗಳೂರು: ಮುಡಾ ಹಗರಣದಲ್ಲಿ (Muda Case) ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತಕ್ಷಣದ ರಿಲೀಫ್ ಸಿಕ್ಕಿದೆ. ಸಿದ್ದರಾಮಯ್ಯ ವಿರುದ್ದ ಯಾವುದೇ ತಕ್ಷಣದ ಕ್ರಮ ಕೈಗೊಳ್ಳಬಾರದು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಗೆ (High Court) ಸೂಚನೆ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದರು.
ಆಗಸ್ಟ್ 29ರವರೆಗೆ ಮಧ್ಯಂತರ ತಡೆ ನೀಡಲಾಗಿದೆ. 29ರಂದು ಹೈಕೋರ್ಟ್ ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.
ರಾಜ್ಯಪಾಲರ ಕ್ರಮವು “ಕಾನೂನುಬಾಹಿರ ಮತ್ತು ಕಾನೂನಿನ ಅಧಿಕಾರ ರಹಿತ” ಮತ್ತು ಅವರ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡುವುದರಿಂದ “ತಮ್ಮ ಖ್ಯಾತಿಗೆ ಹಾನಿ” ಮತ್ತು “ಆಡಳಿತವನ್ನು ಅಡ್ಡಿಪಡಿಸುವ ಅಪಾಯವಿದೆ” ಮತ್ತು ಸಂಭಾವ್ಯವಾಗಿ ರಾಜಕೀಯ ಅಸ್ಥಿರತೆಗೆ ಕಾರಣವಾಗುತ್ತದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಈ ಮಧ್ಯಂತರ ಪರಿಹಾರವನ್ನು ಕೋರಿದ್ದರು.
ಸಿದ್ದರಾಮಯ್ಯ ಪರ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ತುಷಾರ್ ಮೆಹ್ತಾ ಮತ್ತು ದೂರುದಾರ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.