Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮನು ಸಿಂಘ್ವಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿವೇಶನಗಳ ಹಿಂದಿರುಗಿಸುವ ತೀರ್ಮಾನವನ್ನು ಬಿಜೆಪಿ ಶ್ಲಾಘಿಸಬೇಕು, ಅದು ಬಿಟ್ಟು ಬಿಜೆಪಿಯವರು ದ್ವೇಷ ಮಾಡುತ್ತಿದ್ದಾರೆ. ತಮ್ಮ ಪತಿಯ ಸ್ವಚ್ಛ ರಾಜಕೀಯ ಜೀವನಕ್ಕೆ ಅಡ್ಡಿ ಆಗಬಾರದೆಂದು ಮುಡಾಗೆ 14 ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಬಿಜೆಪಿಯವರು ಈ ನಿರ್ಧಾರವನ್ನು ತಮಾಷೆ ಮಾಡುತ್ತಿದ್ದಾರೆ ಎಂದರು.
ಇ.ಡಿ. ಬಿಜೆಪಿಯ ಎಲೆಕ್ಷನ್ ಡಿಪಾರ್ಟ್‌ಮೆಂಟ್ ಆಗಿದೆ. ಕರ್ನಾಟಕದ ಜನರು ಬಿಜೆಪಿಗೆ ಬಹುಮತ ನೀಡದ ಕಾರಣ, ಸಿದ್ದರಾಮಯ್ಯ ಅವರ ಮೇಲೆ ದಾಳಿ ನಡೆಸಲಾಗಿದೆ. ಇ.ಡಿ. ದಾಖಲಿಸಿರುವ ಪ್ರಕರಣ ಸಂಪೂರ್ಣವಾಗಿ ರಾಜಕೀಯ ದ್ವೇಷದಿಂದ ಕೂಡಿದೆ. ಪ್ರಜಾಪ್ರಭುತ್ವದಿಂದ ಆಯ್ಕೆಯಾದ ಸರ್ಕಾರವನ್ನು ಉರುಳಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇದಕ್ಕೆ ಹೆದರುವುದಿಲ್ಲ. ಸತ್ಯ ಆಚೆ ಬರುತ್ತದೆ. ನಾವು ನೀಡಿರುವ ಗ್ಯಾರಂಟಿಗಳ ಪೂರ್ಣಗೊಳಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಹೇಳಿದ್ದಾರೆ.