Advertisement

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

07:49 PM Sep 24, 2024 | Team Udayavani |

ಮಂಡ್ಯ: ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಕುರಿತ ಹೈಕೋರ್ಟ್‌ ಆದೇಶದ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲ ಮುಗಿಯಲಿ. ಅದೆಲ್ಲ ಮುಗಿದ ಬಳಿಕ ಮಾತನಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Advertisement

ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರ ಜತೆ ಹೆಜ್ಜೆ ಹಾಕಿದ್ದೇನೆ. ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ, ಇರುವ ಪರಿಸ್ಥಿತಿಯ ಜನರಿಗೆ ಹೇಳಿದ್ದೇನೆ. ದೇಶದ ಕಾನೂನಿನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ಏನು ತೀರ್ಪು ಬೇಕು ಅದು ನ್ಯಾಯಾಲಯ ಕೊಡುತ್ತದೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು ಎಂದು ಸಚಿವರು ಹೇಳಿದರು.

ನಾನು ಸಿದ್ದರಾಮಯ್ಯ ಅವರಿಗೆ ಏನನ್ನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಶಿಯನ್  ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ, ಮಾಡಲಿ, ಉತ್ತರ ಕೊಡುತ್ತೇನೆ. ಪ್ರಾಸಿಕ್ಯೂಷನ್ ಪ್ರಕರಣ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ ಎಂದು ತಿಳಿಸಿದರು.

ತಮ್ಮ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆಸಿದ ಅವರು, ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದರೆ, ಹೊತ್ತುಕೊಳ್ಳಿ ಎಂದು ನಾನು ಹೇಳಲು ಆಗುತ್ತಾ? ನನ್ನನ್ನು ಇಕ್ಕಟ್ಟಿಗೆ ಸಿಕ್ಕಿಸಲು ಹೋಗಿದ್ದಾರೆ. ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನ ಇದೆ. ನಾನು ಇದನ್ನು ಷಡ್ಯಂತ್ರ ಎನ್ನುವುದಿಲ್ಲ. ಕುಮಾರಸ್ವಾಮಿ ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಜನರ ನಡುವೆ ಕಂದಕ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ. ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next