Advertisement

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

01:28 AM Aug 24, 2024 | Team Udayavani |

ಬೆಂಗಳೂರು: “ಮುಡಾದಲ್ಲಿ 50:50ರ ಅನುಪಾತದಲ್ಲಿಯೇ ಬದಲಿ ನಿವೇಶನ ನೀಡಬೇಕು ಎಂದು ಮುಖ್ಯಮಂತ್ರಿ ಸಾಹೇಬರ ಧರ್ಮಪತ್ನಿ “ಆಗ್ರಹ’ ಮಾಡಿದ್ದಾರೆ.ಮುಖ್ಯಮಂತ್ರಿಗಳ ಪತ್ನಿಗೆ ಮಾರು ಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿ ಅಥವಾ 40:60ರ ಅನು ಪಾತದಲ್ಲಿ ನಿವೇಶನ ನೀಡುವುದಾಗಿ ಮುಡಾ ತಿಳಿಸಿದ್ದರೂ ಬದಲಿ ಜಮೀನನ್ನೇ ನೀಡುವಂತೆ ಆಗ್ರಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ದಾಖಲೆ ಸಹಿತ ಆರೋಪಿಸಿದ್ದಾರೆ.

Advertisement

ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮ “ಎಕ್ಸ್‌’ ಖಾತೆಯಲ್ಲಿ ಶುಕ್ರವಾರ ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ. ಈ ದಾಖಲೆಯನ್ನು ಉಲ್ಲೇಖಿಸಿ “ಇದು ಮುಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನೆನ್ನುತ್ತೀರಿ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯನವರೇ… ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನು ಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ’ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಪ್ರಾಧಿಕಾರದ ಸಲಹೆಗೆ ಸಿಎಂ ಅವರ ಪತ್ನಿ ಒಪ್ಪಿಗೆ ನೀಡದೆ ಬದಲಿ ಜಮೀನನ್ನೇ ನೀಡುವಂತೆ ಆಗ್ರಹಿಸಿರುತ್ತಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

“ಇದು ತಮ್ಮ ಪ್ರಕಾರ ಟಿಪ್ಪಣಿಯೋ ಒಕ್ಕಣೆಯೋ ಅಥವಾ ಅಪ್ಪಣೆಯೋ? ಸೂಪರ್‌ ಸಿಎಂ ಅವರೇ ಆಗ್ರಹಿಸಿದ್ದಾರೆ ಎಂದಾದರೆ ಮುಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್‌ ನುಂಗಿತ್ತಾ?’ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next