Advertisement

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

03:26 AM Nov 27, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ವಿರುದ್ಧ ಆರೋಪ ಕೇಳಿ ಬಂದಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ.

Advertisement

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ದುಷ್ಯಂತ್‌ ದವೆ, ಮುಡಾ ಪ್ರಕರಣದಲ್ಲಿ ಭೂಮಾಲಕರಾಗಿರುವ ಜೆ. ದೇವರಾಜು ತಮ್ಮ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು, ಅದರ ವಿಚಾರಣೆ ಡಿಸೆಂಬರ್‌ 5ರಂದು ವಿಭಾಗೀಯ ನ್ಯಾಯಪೀಠದಲ್ಲಿ ನಿಗದಿಯಾಗಿದೆ.

ಆದ್ದರಿಂದ ಈ ಪ್ರಕರಣವೂ ಮುಂದೂಡಿಕೆಯಾಗಬೇಕು. ಡಿ. 5ರ ಬಳಿಕ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು. ಅದರಂತೆ ವಿಚಾರಣೆಯನ್ನು ಡಿ. 10ಕ್ಕೆ ನಿಗದಿಪಡಿಸುವುದಾಗಿ ನ್ಯಾಯಪೀಠ ಹೇಳಿತು.

Advertisement

Udayavani is now on Telegram. Click here to join our channel and stay updated with the latest news.

Next