Advertisement

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

12:01 AM Nov 26, 2024 | Team Udayavani |

ಮೈಸೂರು: ಮುಡಾದಲ್ಲಿನ 50:50ರ ಅನುಪಾತದಲ್ಲಿನ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರದ ತನಿಖೆಯನ್ನು ಸರಕಾರ ದೇಸಾಯಿ ಆಯೋಗಕ್ಕೆ ವಹಿಸುವ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ತನಿಖೆಗೆ ವಹಿಸುವ ಮುನ್ನವೇ ಮುಡಾದಲ್ಲಿನ ಪ್ರಮುಖ ದಾಖಲೆಗಳು ನಾಪತ್ತೆಯಾಗಿವೆ ಎಂಬ ಆರೋಪ ಕೇಳಿಬಂದಿದೆ.

Advertisement

ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿ, ಮುಡಾ ಹಗರಣದ ತನಿಖೆಗೂ ಮುನ್ನವೇ ಹಲವು ದಾಖಲೆಗಳು ನಾಪತ್ತೆಯಾಗಿದ್ದವು. ಈ ಕುರಿತು ಲೋಕಾಯುಕ್ತ ವರದಿಯೇ ಸ್ಪಷ್ಟವಾಗಿ ಉಲ್ಲೇಖಿಸಿದೆ. ಸಚಿವ ಭೈರತಿ ಸುರೇಶ್‌ ಅವರು ಪ್ರಕರಣದ ತನಿಖೆಗೆ ಒಂದು ದಿನ ಮುನ್ನಾ ಕೆಲ ಅಧಿಕಾರಿಗಳೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆಗಮಿಸಿ, ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಹಿಂದಿನ ಲೋಕಾಯುಕ್ತ ಎಸ್‌ಪಿ ಸುಜಿತ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ವೆಂಕಟಾಚಲಪತಿ ಅವರು ಸಚಿವರಿಗೆ ಕಡತ ನೀಡಿದ್ದಾರೆಂದು ಆರೋಪಿಸಿದ್ದು ಈ ಬಗ್ಗೆ ಲೋಕಾಯುಕ್ತರೇ ನೀಡಿರುವ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಇದರ ಪ್ರತಿ ಕೂಡ ನಮಗೆ ಲಭ್ಯವಿದ್ದು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಇಂದು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೂಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್‌ಗೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ನ. 26) ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next