Advertisement

MUDA Case: ಸಿಎಂ ಪತ್ನಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ: ಸ್ನೇಹಮಯಿ ಕೃಷ್ಣ

03:19 AM Nov 11, 2024 | Team Udayavani |

ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೂಂದು ಗಂಭೀರ ಆರೋಪ ಮಾಡಿದ್ದಾರೆ.

Advertisement

ಶೇ. 50:50 ಅನುಪಾತದಲ್ಲಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್‌ ಪಾವತಿ ಮಾಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ.

ಬಿ.ಎಂ. ಪಾರ್ವತಿ ಅವರಿಗೆ ನೀಡಲಾಗಿರುವ ಕ್ರಯ ಪತ್ರದಲ್ಲಿ ಮುಡಾದ ವಿಶೇಷ ತಹಶೀಲ್ದಾರ್‌ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದು, ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಈ ಸಾಕ್ಷ್ಯದ ಬಗ್ಗೆ ಸಿದ್ದರಾಮಯ್ಯ ನಾಡಿನ ಜನತೆಗೆ ಉತ್ತರಿಸುವರೇ? ಎಂದಿರುವ ಸ್ನೇಹಮಯಿ ಕೃಷ್ಣ, ಈ ದಾಖಲೆ ಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next