Advertisement
ನಗರದಲ್ಲಿ ಮಂಗಳವಾರ(ಸೆ.03) ಸುದ್ದಿಗಾರರ ಜತೆ ಮಾತನಾಡಿ, ಯಾರೇ ಆಗಲಿ ತುಂಬಾ ದಿನ ಎಲ್ಲರಿಗೂ ಮೋಸ ಮಾಡಲು ಆಗುವುದಿಲ್ಲ. ನಾನು ಮೈಸೂರು ಉಸ್ತುವಾರಿ ಮಂತ್ರಿಯಾಗಿದ್ದಾಗ 7,900 ಸೈಟ್ ಗಳನ್ನು ಎರಡೂವರೆ ವರ್ಷದಲ್ಲಿ ಸಿದ್ಧ ಮಾಡಿಸಿದ್ದೆ. ಕೋವಿಡ್ ಮುಗಿದ ಮೇಲೆ ಹರಾಜು ಹಾಕಿಸುವ ಉದ್ದೇಶವಿತ್ತು. ಇದರಿಂದ 15 ಸಾವಿರ ಕೋಟಿ ರೂ. ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ರಾತ್ರಿ ಒಂದು ಗಂಟೆಗೆ ನನಗೆ ಮೈಸೂರಿನಿಂದಲೇ ನನ್ನನ್ನು ಎತ್ತಂಗಡಿ ಮಾಡಲಾಯಿತು ಎಂದು ವಿವರಿಸಿದರು.
Related Articles
Advertisement
ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿ ಚಿಂತಕರಲ್ಲಿ ಒಬ್ಬರು. ಯಾರು ಯೂಟರ್ನ್ ಹೊಡೆದಿಲ್ಲ. ಮೂರು ನಾಲ್ಕು ದಿನಗಳಲ್ಲಿ ಎಲ್ಲವೂ ಹೊರಗೆ ಬರುತ್ತದೆ. ರಾಜ್ಯಪಾಲರ ಹುದ್ದೆ ಆಯಾ ರಾಜ್ಯಗಳಿಗೆ ಗೌರವಿಸುವ ಹುದ್ದೆ. ಕಾನೂನು ಸಂರಕ್ಷಣೆ ಮಾಡುವುದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರ ತೀರ್ಮಾನ ಸರಿಯಾಗಿದೆ. ಕಾಂಗ್ರೆಸ್ ನವರು ಬರೀ ಹುಲಿ ಬಂತು ಹುಲಿ ಎನ್ನುವ ಜಾಯಮಾನದವರು. ಎಷ್ಟು ಜನರಿಗೆ ಕಿವಿಯಲ್ಲಿ ಹೂ ಇಡುತ್ತಾರೆ. ಕೋವಿಡ್ ತನಿಖೆ ಅಗತ್ಯ ಇದೆಯಾ? ಎಂದು ಪ್ರಶ್ನಿಸಿದರು.