Advertisement
ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು. ಆದರೆ, ಮರಿಗೌಡ ಅವರು, ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.
ಮುಡಾ ಹಗರಣ ಸಂಬಂಧ ತೀವ್ರ ಮುಜುಗರ ಅನುಭವಿಸಿರುವ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಮೈಸೂರು ನಗರಾಭಿವೃದ್ಧಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.