Advertisement

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

06:06 PM Oct 10, 2024 | Team Udayavani |

ಬೆಳಗಾವಿ : ಮುಡಾ ಕಾರ್ಮೋಡಗಳು ಈಗ ಮುಖ್ಯಮಂತ್ರಿ ಕುರ್ಚಿಯನ್ನು ಆವರಿಸಿಕೊಂಡಿವೆ. ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬೆಳಗಾವಿಯಲ್ಲಿ ಗುರುವಾರ(ಅ10)ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

Advertisement

ಬಹುಶಃ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿಗಳನ್ನು ನೋಡಬಹುದು. ಇದರಲ್ಲಿ ಅನುಮಾನ ಬೇಡ ಎಂದು ಹೊಸ ಬಾಂಬ್ ಸಿಡಿಸಿದರು.

ಮುಖ್ಯಮಂತ್ರಿಗಳ ಹುದ್ದೆಗೆ ಸಚಿವರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಸಿದ್ದರಾಮಯ್ಯ ಐದು ವರ್ಷ ಪೂರ್ಣಗೊಳಿಸುವದಿಲ್ಲ ಎಂಬುದು ಸಚಿವರಿಗೆ ಹಾಗೂ ಸ್ವತಃ ಸಿದ್ದರಾಮಯ್ಯ ಅವರಿಗೆ ಮನದಟ್ಟಾಗಿದೆ.ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಆರೋಪಿ ಸ್ಥಾನದಲ್ಲಿದ್ದಾರೆ. ಹೀಗಿರುವಾಗ ಭಂಡತನ ಬಿಟ್ಟು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು. ಪ್ರಕರಣದ ಆಳ ನೋಡಿದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು.ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಪಕ್ಷದಲ್ಲಿ ಈಗ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತ ಹೋಗುತ್ತಿದೆ.ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ. ಯಾರು ಮುಖ್ಯಮಂತ್ರಿಗಳಾಗುತ್ತಾರೆ ಎಂಬುದನ್ನು ಕಾದು ನೋಡೋಣ’ ಎಂದರು.

ಆದರೆ ನಾವು ಐದು ವರ್ಷ ವಿರೋಧ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತೇವೆ.ಈಗ ಕಾಂಗ್ರೆಸ್ ಸರಕಾರ ಕೋಮಾ ಸ್ಥಿತಿಯಲ್ಲಿದೆ. ಅಭಿವೃದ್ಧಿ ಕಾರ್ಯಗಳು ಆರಂಭವಾಗಿಯೇ ಇಲ್ಲ. ಇದರ ಮಧ್ಯೆ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಪ್ರಯತ್ನ ಆರಂಭವಾಗಿದೆ.ಮುಡಾ ಕಾರ್ಮೊಡಗಳು ಮುಖ್ಯಮಂತ್ರಿ ಕುರ್ಚಿಗೆ ಸಂಚಕಾರ ತಂದಿದೆ. ಸಚಿವ ಸಂಪುಟದ ಸದಸ್ಯರಿಗೆ ಮತ್ತು ಸರ್ಕಾರಕ್ಕೆ ಬೆಂಗಳೂರೇ ಕರ್ನಾಟಕದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಪ್ರವಾಸ ಕೈ ಬಿಟ್ಟಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದ್ದಾರೆ. ಈ ಸರ್ಕಾರದ ಬಂದ ಮೇಲೆ ಗುದ್ದಲಿ ಪೂಜೆ ಅಲ್ಲಾ ಗುದ್ದಲಿ ಕೂಡ ಕಾಣದ ಸ್ಥಿತಿ ಇದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಹಳೆ ಪ್ರಕರಣಗಳಿಗೆ ಮರು ಜೀವ ನೀಡಿ ವಿರೋಧ ಪಕ್ಷದವರನ್ನು ಬೆದರಿಸಿದರೆ ನಮ್ಮ ಮುಖ್ಯಮಂತ್ರಿಗಳ ಖುರ್ಚಿ ಉಳಿಯುತ್ತದೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನವರಿದ್ದಾರೆ. ಇದು ನಾಲಾಯಕ್ ಸರಕಾರ. ಈ ಸರಕಾರದ ಯೋಗ್ಯತೆ ಏನು ಎಂಬುದು ಗೊತ್ತಾಗುತ್ತಿದೆ. ಮುಖ್ಯಮಂತ್ರಿಗಳಿಗೆ ಏನು ಮಾಡಬೇಕು ಎಂಬುದು ತೋಚುತ್ತಿಲ್ಲ. ಹಳೆ ಪ್ರಕರಣಗಳನ್ನು ಕೆದಕಿದರೆ ವಿರೋಧ ಪಕ್ಷದವರು ಹೆದರುತ್ತಾರೆ ಎಂಭ ಭ್ರಮೆಯಲ್ಲಿದ್ದಾರೆ.ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ತಮ್ಮ ಇಲಾಖೆಯ ಸಮಸ್ಯೆಗಳ ಬಗ್ಗೆ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆಗಳ ಕುರಿತು ಕೇಳಲು ಸಮಯ ಇಲ್ಲ. ಅದೇ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ಮಾಡಿದರೆ ಒಂದು ಗಂಟೆ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ಕಿಡಿ ಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next