Advertisement

MUDA ಹಗರಣ: ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್‌ ಕುಮಾರ್‌ ಅಮಾನತು

10:20 PM Sep 02, 2024 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟ್​ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಹಿಂದೆ ಮುಡಾ ಆಯುಕ್ತರಾಗಿದ್ದ KAS ಅಧಿಕಾರಿ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಸರಕಾರ ಅಮಾನತು ಮಾಡಿದೆ. ಭಾರೀ ಕೋಲಾಹಲ ಮೂಡಿಸಿರುವ ಹಗರಣದಲ್ಲಿ ಮೊದಲ ತಲೆದಂಡ ಇದಾಗಿದೆ.

Advertisement

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಈಗಗಾಲೇ ಬಿಜೆಪಿ ಮತ್ತು ಜೆಡಿಎಸ್ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಈ ವೇಳೆ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿರುವ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿರುವುದು ಪ್ರಕರಣದಲ್ಲಿ ಇನ್ನಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:KPSC EXAM: ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸಿ: ಸಿದ್ದರಾಮಯ್ಯ 

ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಆದೇಶಾನುಸಾರವಾಗಿ ಅಮಾನತುಗೊಳಿಸಿ ಕಾರ್ಯದರ್ಶಿ ಉಮಾದೇವಿ ಅವರು ಸೋಮವಾರ (ಸೆ2) ರಂದು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next