Advertisement

MUDA: ಸಿಎಂಗೆ ಪ್ರಾಮಾಣಿಕತೆ ಇದ್ದರೆ ಮುಡಾ ಪ್ರಕರಣ ಸಿಬಿಐಗೆ ವಹಿಸಲಿ: ಬಿ.ಎಸ್‌.ಯಡಿಯೂರಪ್ಪ

11:33 PM Nov 06, 2024 | Team Udayavani |

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಸಾಧ್ಯವಿಲ್ಲ. ಸಿಎಂ ತಾನು ಸಾಚ ಎಂದು ತೋರಿಸಿಕೊಳ್ಳುವ ಪ್ರಯತ್ನ ಅಷ್ಟೇ. ಅವರಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ, ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸವಾಲು ಹಾಕಿದರು.

Advertisement

ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.

ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ. ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ಇಬ್ಬರೂ ರಾಜೀನಾಮೆ ಕೊಡಬೇಕು. ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ. ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.

ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೆ, ವಕ್ಫ್ ಮಂಡಳಿ ನೀಡುತ್ತಿರುವ ನೋಟಿಸ್‌ ಬಗ್ಗೆಯೂ ಸಮಗ್ರ ತನಿಖೆ ಆಗಬೇಕು. ಅಲ್ಲಿಯವರೆಗೆ ವಕ್ಫ್ ಸಚಿವ ಜಮೀರ್‌ ಅಹ್ಮದ್‌ ಖಾನ್‌ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next