Advertisement

Muda scam: ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

09:43 PM Jul 20, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.

Advertisement

ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ, ಬಾವ ಮೈದುನ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ, ಮುಡಾದ ಮಾಜಿ ಅಧ್ಯಕ್ಷರಾದ ಬಸವೇಗೌಡ, ಎಚ್‌.ವಿ. ರಾಜೀವ್‌ ಮತ್ತು ಆಯುಕ್ತರಾಗಿದ್ದ ಡಿ.ಬಿ. ನಟೇಶ್‌ ವಿರುದ್ಧವೂ ಬಿಬಿಎಂಪಿ ಮಾಜಿ ಸದಸ್ಯ ಎನ್‌.ಆರ್‌. ರಮೇಶ್‌ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.

ಶನಿವಾರ ಲೋಕಾಯುಕ್ತ ಕಚೇರಿಗೆ ತೆರಳಿದ ಅವರು 400 ಪುಟಗಳ ದಾಖಲೆಗಳನ್ನು ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನಗಳ ಹೆಸರಿನಲ್ಲಿ ಬೃಹತ್‌ ಹಗರಣ ನಡೆದಿದ್ದು, ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಸರಕಾರಕ್ಕೆ 40 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಷ್ಟ ಉಂಟು ಮಾಡಿದ್ದಾರೆ. ಒಂದು ವೇಳೆ ಲೋಕಾಯುಕ್ತರು ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರುವೆ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next