Advertisement
ಶುಕ್ರವಾರ (ಆ.09) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ. ಇತಿಹಾಸದಲ್ಲಿ ಒಂದು ವಿರೋಧ ಪಕ್ಷದ ವಿರುದ್ಧ ಒಂದು ಆಡಳಿತ ಪಕ್ಷ ಸಮಾವೇಶವನ್ನು ಮಾಡುತ್ತಿದೆ. ಒಂದು ಆಡಳಿತ ಪಕ್ಷವಾಗಿ ಅಭಿವೃದ್ಧಿ ಮಾಡಲು ಅವಕಾಶ ಕೊಟ್ಟು ವಿರೋಧ ಪಕ್ಷವಾಗಿ ಕೆಲಸ ನಾವು ಮಾಡುತ್ತಿದ್ದೇವೆ. ಜನ ಸ್ಪಂದನೆ ನೋಡಿದರೆ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ ಎಂದರು.
Related Articles
Advertisement
ಶಿವಮೊಗ್ಗ ವಿಮಾನ ನಿಲ್ದಾಣ ನೈಟ್ ಲ್ಯಾಂಡಿಂಗ್ ಕಾಮಗಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ, ಸರಕಾರ ಕಾಮಗಾರಿ ನಡೆಸಿದ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಿಲ್ಲ. ಹೀಗಾಗಿ ಕಾಮಗಾರಿ ವಿಳಂಬವಾಗುತ್ತಿದೆ. ನಾಳೆ ಶಿವಮೊಗ್ಗ ಏರ್ ಪೋರ್ಟ್ ಗೆ ಬೀಗ ಹಾಕುವ ಪರಿಸ್ಥಿತಿ ಬಂದರೆ ಅದಕ್ಕೆ ಕಾಂಗ್ರೆಸ್ ಸರಕಾರ ಕಾರಣವಾಗುತ್ತದೆ. ಕಾಂಗ್ರೆಸ್ ನವರು ಆರೋಪ ಮಾಡುವ ಪ್ರಮೇಯವೇ ಇಲ್ಲ. 99 ರಷ್ಟು ಕೆಲಸಗಳು ಮುಗಿದು ಹೋಗಿವೆ. ಕೇವಲ ಒಂದು ಪರ್ಸೆಂಟ್ ನಷ್ಟು ಮಾತ್ರ ಬಾಕಿ ಉಳಿದಿತ್ತು. ಅದಕ್ಕೆ ಒಂದೂವರೆ ವರ್ಷ ತೆಗೆದುಕೊಂಡಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ನೈಟ್ ಲ್ಯಾಂಡ್ ಗೆ ಒಪ್ಪಿಗೆ ಕೊಟ್ಟಿದೆ. ದೇವರ ದಯೆಯಿಂದ ನಾನು ಕೇಂದ್ರ ಸರ್ಕಾರದಿಂದ ಕ್ಲಿಯರೆನ್ಸ್ ಕೊಡಿಸಿದ್ದೇನೆ ಎಂದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ವಿಮಾನ ಹಾರಾಟವಾಗಿದೆ ಎಂಬ ಮಧು ಬಂಗಾರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರಿಗೆ ನಾಚಿಕೆ ಆಗಬೇಕು. ಇದನ್ನು ಬಿಟ್ಟು ಬೇರೆ ಏನು ಹೇಳುವುದಕ್ಕೆ ಆಗುವುದಿಲ್ಲ. ಆ ತರಹದ ಮಾತುಗಳಿಗೆ ಉತ್ತರ ಕೊಡಲು ನನಗೆ ನಾಚಿಕೆ ಆಗುತ್ತಿದೆ ಎಂದರು.
ಬೈಂದೂರಿಗೆ ವಿಮಾನ ನಿಲ್ದಾಣ ಮಾಡಲು ಜಾಗ ಮೀಸಲಿಟ್ಟಿದ್ದೇವೆ. ರಾಜ್ಯದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದೇನೆ. ಅವರು ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ. ಕೇಂದ್ರ ಸರಕಾರ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧವಿದೆ. ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಬೇಕು ಎಂಬ ಅಪೇಕ್ಷೆಯಿದೆ. ಒಂದು ಅದಕ್ಕೆ ಬೇಕಾದ ಎಲ್ಲಾ ಪ್ರಪೋಸಲ್ ಸಿದ್ಧವಾಗಿದೆ ಎಂದರು.