Advertisement

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ

07:01 PM Sep 23, 2024 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲವೆಬ್ಬಿಸಿರುವ ಮುಡಾ ಭೂ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಸಿದ ಅರ್ಜಿಯ ತೀರ್ಪನ್ನು ನಾಳೆ (ಮಂಗಳವಾರ,ಸೆ 24 ) ರಂದು ಕರ್ನಾಟಕ ಹೈಕೋರ್ಟ್ ಪ್ರಕಟಿಸಲಿದೆ.

Advertisement

ಸುದೀರ್ಘ ವಾದ ಆಲಿಸಿರುವ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ಅವರ ಏಕಸದಸ್ಯ ಪೀಠ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ತೀರ್ಪಿನಲ್ಲಿ ಅಡಗಿದೆ ಎನ್ನಲಾಗಿದ್ದು ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.

ಸಿದ್ದರಾಮಯ್ಯ ಅವರ ಪರ ಹಿರಿಯ ವಕೀಲ ಸಅಭಿಷೇಕ್‌ ಮನು ಸಿಂಘ್ವಿ ಸೇರಿದಂತೆ ಹಲವರು ವಾದ ಮಂಡಿಸಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡನೆ ಮಾಡಿದ್ದಾರೆ. ದೂರುದಾರ ಟಿ.ಜೆ. ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರವೂ ಸುದೀರ್ಘ ವಾದ ಮಂಡನೆಯನ್ನು ವಕೀಲರು ಮಾಡಿದ್ದಾರೆ. ಈ ಎಲ್ಲಾ ವಾದ ಪ್ರತಿವಾದ ಆಲಿಸಿ ನ್ಯಾಯಮೂರ್ತಿಗಳು ಆದೇಶವನ್ನು ಕಾಯ್ದಿರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next