Advertisement

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

01:04 AM Nov 15, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ ನವೆಂಬರ್‌ 23ಕ್ಕೆ ನಿಗದಿಪಡಿಸಿದೆ.

Advertisement

ಗುರುವಾರ ಹೈಕೋರ್ಟ್‌ ಕಲಾಪ ಆರಂಭವಾ ಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾದ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೆ ವಿಚಾರಣೆಗೆ ನಿಗದಿಯಾಗಿಲ್ಲ. ತುರ್ತಾಗಿ ಅರ್ಜಿ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ವಾದವನ್ನು ಅಂಗೀಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್‌ 23ಕ್ಕೆ ನಿಗದಿಪಡಿಸಿತು. ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ, ಸಿಎಂ ವಿರುದ್ಧ ವಿಚಾರಣೆಗೆ ಆದೇಶಿಸಿ ಸೆ. 24ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಅಕ್ಟೋಬರ್‌ 24ಕ್ಕೆ ಮುಖ್ಯಮಂತ್ರಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಿಗದಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಪರ ವಕೀಲರು ಮೇಲ್ಮನವಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next