Advertisement
ನಕಲಿ ದಾಖಲೆ ಸೃಷ್ಟಿಸಿ ಮೈಸೂರು ನಗರಾಭಿವೃದ್ಧಿಗೆ ವಂಚಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನ ಪಡೆದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ. ಈ ಸಂಬಂಧ ರಾಜ್ಯಪಾಲರು, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
* ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದ್ದು, ಮೂಲ ಭೂ ಮಾಲಕರ ಮಗ ಎನ್ನುವ ದೇವರಾಜು ಅಸ್ತಿತ್ವ ನಿಜವೇ? * 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್‌ಟಿಸಿಗಳಲ್ಲಿ ಭೂ ಸ್ವಾಧೀನ ಎಂಬ ಉÇÉೇಖ ಏಕಿದೆ?
Related Articles
Advertisement
* ಪಾರ್ವತಿ ಹೆಸರಿಗೆ ಖಾತೆ ವರ್ಗಾವಣೆ ಮಾಡುವಾಗ ಸ್ಥಳ ಪರಿಶೀಲನೆ ಮಾಡಲಿಲ್ಲವೇ? ಮುಡಾ ಬಡಾವಣೆ ಅಭಿವೃದ್ಧಿ ಮಾಡಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಲಾಯಿತು?
* ನಿಜವಾದ ಭೂ ಮಾಲಕರ ವಂಶವೃಕ್ಷದ ಉಲ್ಲೇಖ ಏಕಿಲ್ಲ?
* 2004-05ನೇ ಸಾಲಿನ ಆರ್‌ಟಿಸಿಯ ಕಲಂ 10ರಲ್ಲಿ ಎಂಆರ್ 8/92-93 ಎಂಬ ಉಲ್ಲೇಖವಿದೆ. ಇದರ ಎಂಆರ್ ಗಮನಿಸಿದಾಗ ಮಾರಪ್ಪ ಎಂಬವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ತಿತ್ವದಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ ಎಂದು ಪ್ರಶ್ನಿಸಿದ್ದಾರೆ.