Advertisement
ನಗರದ ಬಿಜೆಪಿ ಕಚೇರಿಯಲ್ಲಿ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಸಿಎಂ ಕುಟುಂಬಕ್ಕೆ ಹಂಚಿಕೆಯಾದ ಮುಡಾ ನಿವೇಶನಗಳ ವಾಪಸ್ ಕೊಡುವ ನಿರ್ಣಯ ಮಾಡಿದ್ದಾರೆ ಎಂದರೆ ತಪ್ಪು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಮುಖ್ಯಮಂತ್ರಿಯವರು ತಮ್ಮ ತಪ್ಪು ಒಪ್ಪಿಕೊಳ್ಳುವ ಸಂದರ್ಭ ಬರುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯನವರು ಇನ್ನಾದರೂ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ರಾಜೀನಾಮೆ ನೀಡುವ ಮೊದಲು ಸಿಎಂ ರಾಜ್ಯಪಾಲರ ಕ್ಷಮೆ ಕೇಳಬೇಕು. ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಹಿಂದೆ ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಬಂದಾಗ ಎಸಿಬಿ ರಚನೆ ಮಾಡಿದ್ದರು. ಲೋಕಾಯುಕ್ತ ಸಂಸ್ಥೆ ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿದ್ದರು. ಎಸಿಬಿ ರಚಿಸಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿದ್ದರು. ಮುಡಾ ಸೈಟ್ ಹಂಚಿಕೆ ಕೇಸ್ನಲ್ಲಿ ಎರಡು ವಿಚಾರ ಗಮನಿಸಬೇಕು. ಸಿಎಂ ಪತ್ನಿಗೆ 14 ನಿವೇಶನ ಹಂಚಿಕೆ ಮಾಡಿದ್ದು ಒಂದು ಕಡೆಯಾದರೆ. ಸಿಎಂ ಹಿಂಬಾಲಕರು, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೂ ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಬಿ.ವೈ.ವಿಜಯೇಂದ್ರ ಆರೋಪಿಸಿದರು.