Advertisement
ಹೈಕೋರ್ಟ್ ಮಂಗಳವಾರ ನೀಡಿದ ಆದೇಶದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರು, ಸಂಪುಟದ ಸಹದ್ಯೋಗಿಗಳು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದರು.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜ್ಯದ ಜನರಿಂದ ಸಂಪೂರ್ಣ ಬಹುಮತದಿಂದ ಈ ವರೆಗೆ ಅಧಿಕಾರಕ್ಕೆ ಬಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನ ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
Related Articles
ಕೇಂದ್ರ ಸರಕಾರದಿಂದ ಸೇಡಿನ ರಾಜಕಾರಣ:
ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ನನ್ನ ವಿರುದ್ದ ಮಾತ್ರ ಸೇಡಿನ ರಾಜಕೀಯ ಮಾಡುತ್ತಿಲ್ಲ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರ ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯ ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ ಎಂದು ಹೇಳಿದರು.
Advertisement
ಪಕ್ಷದ ಹೈಕಮಾಂಡ್, ಸಚಿವರು, ಶಾಸಕರ ಬೆಂಬಲವಿದೆ:ಡಿಸಿಎಂ ಸೇರಿದಂತೆ ಸಚಿವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತೀಕಾರಕ್ಕೆ ಇಳಿದಿದೆ ಎಂದು ಹೇಳಿದರು. ರಾಜೀನಾಮೆ ಕೊಡಲ್ಲ:
17ಎ ಪಿಸಿ ಕಾಯಿದೆಯಡಿ ತನಿಖೆಗೆ ಅನುಮತಿ ಕೊಟ್ಟ ತಕ್ಷಣ ತಪ್ಪು ಮಾಡಿದ್ದೇನೆ ಅಂತ ಅರ್ಥವಲ್ಲ, ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.