Advertisement
ಮುಡಾ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ಪ್ರಕರಣವಾಗಿರದೇ, ದುರ್ಬಲ ಹಾಗೂ ಬಡವರ್ಗದ ಜನರಿಗೆ ಎಸಗಿರುವ ವಂಚನೆ ಎಂದರು. ರಾಜಕೀಯ ಜೀವನ ತೆರೆದ ಪುಸ್ತಕ ವಿದ್ದಂತೆ. ಸಣ್ಣ ಕಪ್ಪು ಚುಕ್ಕಿಯೂ ಇಲ್ಲ ಎನ್ನುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ಜನತೆಗೆ ಮೋಸ ಮಾಡಿದ್ದಾರೆ. ಈಗ ಆರೋಪಗಳಿಗೆ ಉತ್ತರಿಸಬೇಕಿದೆ ಎಂದು ಸಂಸದರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಮಂಗಳೂರು, ಆ.17: ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡದಿದ್ದರೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಮುಡಾದಲ್ಲಿ ಕಾನೂನುಬಾಹಿರವಾಗಿ ನಿವೇಶನ ಗಳನ್ನು ಪಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಹಮ್ಮಿಕೊಂಡಿತ್ತು. ಈ ಗಂಭೀರ ಪ್ರಕರಣದಲ್ಲಿ ರಾಜ್ಯದ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಿಎಂ ರಾಜೀನಾಮೆ ಕೊಡಬೇಕು. ತಾವು ತಪ್ಪಿತಸ್ಥರಲ್ಲ, ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ಸಿಎಂ, ತಮ್ಮ ರಾಜೀನಾಮೆಯಿಂದ ಹಿಂಜರಿಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
Related Articles
Advertisement
ಮಂಗಳೂರು: ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಶಾಸಕ ರಾದ ಡಾ| ವೈ. ಭರತ್ ಶೆಟ್ಟಿ ಮತ್ತು ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಬೇರೆ ರಾಜ್ಯಗ ಳಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಮುಂದಾ ದಾಗ ಅವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ ಉದಾಹರಣೆಗಳಿವೆ. ಆದರೆ, ಸಿದ್ದರಾಮಯ್ಯ ಅಧಿಕಾರದ ಆಸೆಯಿಂದಾಗಿ ರಾಜೀನಾಮೆ ನೀಡುತ್ತಿಲ್ಲ ಎಂದರು.
ಸಿಎಂ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗ ಸಾಮಾನ್ಯವಾಗಿ ಯೇ ಪ್ರಾಸಿಕ್ಯೂಶನ್ ಆಗುತ್ತದೆ. ತನಿಖೆಯಿಂದ ತಪ್ಪಿತಸ್ಥ ಅಲ್ಲ ಎಂದು ಕಂಡು ಬಂದರೆ ಬಳಿಕ ಮತ್ತೆ ಪಟ್ಟಕ್ಕೇರಲಿ ಎಂದರು. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿದೆ ಎಂದು ಸದನದಲ್ಲಿ ಸಿಎಂ ಒಪ್ಪಿಕೊಂಡಿದ್ದಾರೆ. ಮುಡಾದಲ್ಲಿನ ಭ್ರಷ್ಟಾಚಾರದ ವಿರುದ್ದ ಸದನದಲ್ಲಿ ಚರ್ಚೆಗೂ ಅವಕಾಶ ನೀಡಲಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್‌ನೊಳಗೇ ಸಿಎಂ ಕುರ್ಚಿಗೆ ಪೈಪೋಟಿ ಆರಂಭವಾಗಿದೆ. ಡಿ.ಕೆ. ಶಿವಕುಮಾರ್, ಮಲ್ಲಿಕಾ ರ್ಜುನ ಖರ್ಗೆ, ಉತ್ತರ ಕರ್ನಾಟಕ, ತುಮಕೂರು ಕಡೆಯವರಿಗೆ ಈ ಪ್ರಕರಣದಿಂದ ಖುಷಿಯಾಗಿದೆ ಎಂದು ಡಾ| ವೈ. ಭರತ್ ಶೆಟ್ಟಿ ಹೇಳಿದರು.