Advertisement

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

12:45 AM Sep 25, 2024 | Team Udayavani |

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಆದೇಶಿಸಿದ್ದನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಹಾಸನ, ರಾಮನಗರ, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಿಎಂ ರಾಜೀನಾಮೆಗೆ ಆಗ್ರಹಿಸಿದರು.

ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ: ಪ್ರತಿಭಟನೆ ಹಿನ್ನೆಲೆ, ರಾಜ್ಯದೆಲ್ಲೆಡೆ ಬಿಗಿ ಬಂದೋಬಸ್ತ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ ಸಂಬಂಧ ತನಿಖೆಗೆ ಮಂಗಳವಾರ ಹೈಕೋರ್ಟ್‌ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ, ಗೃಹ ಕಚೇರಿ ಕೃಷ್ಣಾ, ರಾಜಭವನ, ವಿಧಾನಸೌಧ, ವಿಕಾಸಸೌಧ, ಎಂ.ಎಸ್‌. ಬಿಲ್ಡಿಂಗ್‌, ಕೆಪಿಸಿಸಿ ಕಚೇರಿ, ಕಾಂಗ್ರೆಸ್‌ ಭವನ, ಬಿಜೆಪಿ, ಜೆಡಿಎಸ್‌ ಕಚೇರಿ ಸೇರಿ ಪ್ರಮುಖ ಸ್ಥಳಗಳಲ್ಲಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಹಾಗೂ ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ, ಧರಣಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next