Advertisement
ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಒಂದು ವರ್ಷದಿಂದ ಅವರು ಆಡಳಿತ ನಡೆಸುತ್ತಿದ್ದಾರೆ. ಮೂಡಾದಲ್ಲಿ 2010-2011 ಇಸವಿಯಲ್ಲಿನ ಮಂಜೂರಾತಿಯ ಬಗ್ಗೆ ಈಗ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದಾರೆ. ಅವತ್ತು ಗಮನಕ್ಕೆ ಬಂದಿರಲಿಲ್ಲವಾ? ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ಈಗ ತನಿಖೆ ಮಾಡಿಸುತ್ತೇವೆ ಎಂದು ಹೇಳುತ್ತಿದ್ದೀರಾ? ಯಾವ ತನಿಖೆ ನಡೆಸಿ ಯಾರ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಿ?
Related Articles
Advertisement
ರಾಮನಗರದಲ್ಲಿ ಬೆಂಗಳೂರು ಕಸ ಸುರಿಯಲು ಹುನ್ನಾರ:ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ? ಈಗ ಬೆಂಗಳೂರಿನ ಜಾಗವನ್ನು ಯಾವನಿಗೋ 45 ಸಾವಿರ ಕೋಟಿಗೆ ಮೂವತ್ತು ವರ್ಷ ಲೀಸ್?ಗೆ ಕೊಡಲು ಹೊರಟಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡೋದು ಕಸ ತುಂಬಿಸಲಿಕ್ಕಾ? ರಾಮನಗರ ತೆಗೆದು ಬೆಂಗಳೂರು ದಕ್ಷಿಣ ಹೆಸರಿಡುವುದು ಬೆಂಗಳೂರಿನ ಕಸ ತಂದು ತುಂಬಿಸಲಿಕ್ಕಾ? ಕಪ್ಪುಪಟ್ಟಿಯಲ್ಲಿ ಇದ್ದವರನ್ನು ಕರೆದುಕೊಂಡು ಬಂದು ಲೀಸ್ ಕೊಡಲು ಹೊರಟಿದ್ದೀರಾ? ಸುಮ್ಮನೆ ಬಾಯಿ ಚಪಲಕ್ಕೆ ಹೇಳುತ್ತಿಲ್ಲ ನಾನು, ಸರಕಾರದಲ್ಲಿ ಏನೇನು ನಡೆದಿದೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು. ಚನ್ನಪಟ್ಟಣ ಅಭ್ಯರ್ಥಿ ಇನ್ನು ನಿರ್ಧಾರ ಮಾಡಿಲ್ಲ
ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಅಭ್ಯರ್ಥಿಯಾದರೂ ಅವರು ಎನ್ ಡಿಎ ಅಭ್ಯರ್ಥಿಯಾಗುತ್ತಾರೆ. ಎನ್‌ಡಿಎ ಅಭ್ಯರ್ಥಿ ನಿಲ್ಲುವುದಷ್ಟೇ ಅಲ್ಲ, ಗೆಲ್ಲಲೇಬೇಕು. ಗೆಲ್ಲುವುದಕ್ಕೆ ಏನೆಲ್ಲಾ ನಿರ್ಧಾರ ಮಾಡಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಯಾರು ಅಭ್ಯರ್ಥಿ ಎಂದು ಇನ್ನೂ ಚರ್ಚೆ ಹಂತಕ್ಕೆ ಬಂದಿಲ್ಲ. ಕೇಂದ್ರದ ನಾಯಕರು, ರಾಜ್ಯದ ಬಿಜೆಪಿ ನಾಯಕರು ಎಲ್ಲಾ ಕುಳಿತು ಚರ್ಚೆ ಮಾಡುತ್ತೇವೆ. ಯೋಗೇಶ್ವರ್ ಅವರು ಗೆಲ್ಲಲು ಅವಕಾಶ ಇದ್ದರೆ ಅವರೇ ಚುನಾವಣೆಗೆ ನಿಲ್ಲುತ್ತಾರೆ. ಇಲ್ಲವೆಂದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜುನಾಥ್, ಎಚ್.ಕೆ.ಸುರೇಶ್ ಮುಂತಾದವರು ಹಾಜರಿದ್ದರು.