Advertisement
ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದಾಗ, ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಕಾಲಚಕ್ರ ತಿರುಗಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಶುದ್ಧಹಸ್ತರೇ ಆಗಿದ್ದಲ್ಲಿ ವಿಧಾನಸಭಾ ಆವೇಶದಲ್ಲಿ ಚರ್ಚಿಸಬೇಕಿತ್ತು. ಆದರೆ ವಿಧಾನಸಭೆಯಿಂದ ಸಿಎಂ ಓಡಿ ಹೋಗಿದ್ದಾರೆ ಎಂದರು.
Related Articles
Advertisement
ಐವನ್ ಅವರು ತನ್ನ ಮನೆಗೆ ತಾನೇ ಸೂಚನೆ ನೀಡಿ ಕಲ್ಲು ಹೊಡೆಸುವ ಮೂಲಕ ಅನುಕಂಪ ಗಿಟ್ಟಿಸಲು ಯತ್ನಿಸಿದ್ದಾರೆ. ಕಾಂಗ್ರೆಸಿಗರೇ ಐವನ್‌ಗೆ ಛೀಮಾರಿ ಹಾಕುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿ ಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಸಿಎಂ ಹೆದರಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿದರೆ ತನಿಖೆಯ ದಿಕ್ಕು ತಪ್ಪಿಸಲಿದ್ದಾರೆ. ಆದ್ದರಿಂದ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ಸಿಎಂ ವಿರುದ್ಧ ಮುಡಾ ಹಗರಣ ಇರುವ ವೇಳೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಡಾ| ಮಂಜುಳಾ ರಾವ್ ಮಾತನಾಡಿ, ಮಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವೇಳೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಕಾಂಗ್ರೆಸ್ ಸರಕಾರ ಕಲ್ಲು ಹೊಡೆಸಿದೆ ಎಂದರು.
ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನಿತಾ, ಮಾಜಿ ಸಚಿವ ಎಸ್. ಅಂಗಾರ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಾಲಕೃಷ್ಣ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮುಖಂಡರಾದ ರವಿಶಂಕರ ಮಿಜಾರು, ವಿಕಾಸ್ ಪುತ್ತೂರು, ರಮೇಶ್ ಕಂಡೆಟ್ಟು, ತಿಲಕ್‌ರಾಜ್ ಕೃಷ್ಣಾಪುರ, ನಂದನ್ ಮಲ್ಯ ಉಪಸ್ಥಿತರಿದ್ದರು.