Advertisement
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಸಚಿವ ಜಮೀರ್ ಮಾತನಾಡಿ ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ಇದನ್ನೇ ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎನ್ನುವುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತನಿಖೆ ನಡೆಯಲಿ. ಕಾನೂನು ಹೋರಾಟ ಎದುರಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿ ಜತೆ ಇದ್ದೇವೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೆ ಎಂದಿದ್ದಾರೆ. ಇದನ್ನು ಹೊರತುಪಡಿಸಿ ನ್ಯಾಯಾಲಯದ ತೀರ್ಪು ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ. ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದವಾಗಿದೆ. ನನಗೆ ಎಂದಿಗೂ ನ್ಯಾಯಾಲಯದ ಬಗ್ಗೆ ಅತ್ಯಂತ ಗೌರವ ಇದೆ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆಯಾಚಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿ ಇದೆ. ತನಿಖೆ ನಡೆಯಬೇಕು ಎಂದು ತೀರ್ಪು ಪ್ರಕಟವಾಗಿದೆ. ಈ ತೀರ್ಪಿನ ಬಗ್ಗೆ ಮಾತನಾಡುವಾಗ ವಸತಿ ಸಚಿವ ಜಮೀರ್ ಅವರ ಪೊಲಿಟಿಕಲ್ ಜಡ್ಜ್ ಮೆಂಟ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.
Related Articles
ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಉಲ್ಲೇಖಿಸಿ, ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಕೂಡ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದ ಅವರು, ತಮಗೆ ಅರಿವಿಲ್ಲದ, ಅರ್ಥ ಆಗದ ವಿಚಾರಗಳ ಬಗ್ಗೆ ಮಾತನಾಡೋದು ಮೂರ್ಖತನ. ಇವರು (ಜಮೀರ್) ಮಾಡಿದ್ದು ಸಹ ಅದೇ ವಿಜ್ಞಾನ, ಸಮಾಜ, ಗಣಿತ, ಭೂಗೋಳ, ಕನಿಷ್ಠ ಕಾನೂನಿನ ಅರಿವು ಏಕೆ ಕಲಿಯಬೇಕು ಹಾಗೂ ಅಧ್ಯಯನ ಮಾಡಬೇಕು ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದಿದ್ದಾರೆ.
Advertisement