Advertisement
ಬೆಳಗ್ಗೆ ಪಟ್ಟಣದ ಕಲ್ಮೇಶ್ವರ ವೃತ್ತದಿಂದ ಜೆಡಿಎಸ್ ಸದಸ್ಯರು, ನೂರಾರು ಸಾರ್ವಜನಿಕರು ಪುರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆ ಮೂಲಕ ಸಾಗಿ ಪುರಸಭೆ ಮುಂಭಾಗದಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧರಣಿ ಪ್ರಾರಂಭಿಸಿದರು.
Related Articles
Advertisement
ತಾರತಮ್ಯ ಬೇಡ: ಪುರಸಭೆ ಸದಸ್ಯ ಈರಣ್ಣ ಕೊಣ್ಣೂರ ಮಾತನಾಡಿ, ಪುರಸಭೆ ಚುನಾವಣೆಯಲ್ಲಿ 8 ಜೆಡಿಎಸ್ ಅಭ್ಯರ್ಥಿಗಳು ಗೆದ್ದು ಬಂದಿರುವುದು ಇವರಿಗೆ ನುಂಗಲಾರದ ತುತ್ತಾಗಿದೆ. ಅದಕ್ಕಾಗಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದರು.
ಗುರು ಗಂಗನ್ನವರ ಮಾತನಾಡಿ, ಅಧಿಕಾರಿಗಳು ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೆ ಕರ್ತವ್ಯಕ್ಕೆ ರಾಜೀನಾಮೆ ನೀಡಿ ರಾಜಕೀಯ ಕ್ಷೇತ್ರಕ್ಕೆ ಬನ್ನಿ ಎಂದ ಅವರು, ಸಾರ್ವಜನಿಕರ ಸೇವೆ ಮಾಡಲು ನಿಮ್ಮನ್ನು ನಿಯೋಜಿಸಲಾಗಿದೆ. ಇದನ್ನು ಬಿಟ್ಟು ರಾಜಕೀಯ ಮಾಡಿದರೆ ಮುಂದಿನ ದಿನಗಳಲ್ಲಿ ಕಠಿಣ ಪರಿಸ್ಥಿತಿ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಉಗ್ರ ಹೋರಾಟದ ಎಚ್ಚರಿಕೆ: ಚನ್ನಪ್ಪ ಅಥಣಿ ಮಾತನಾಡಿ, ಜೆಡಿಎಸ್ ಗೆದ್ದಿರುವ ಪುರಸಭೆಯ 8 ವಾರ್ಡ್‌ಗಳಲ್ಲಿ ಅವಶ್ಯವಿರುವ ಮೂಲಭೂತ ಸೌಲಭ್ಯ ಒದಗಿಸಲು ಶೀಘ್ರ ಕಾಮಗಾರಿ ಕೈಗೊಳ್ಳಬೇಕು. ವಿಳಂಬವಾದಲ್ಲಿ ಪುರಸಭೆಗೆ ಬೀಗ ಜಡಿದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪುರಸಭೆ ಸದಸ್ಯ ಶಿವಾನಂದ ಸಣ್ಣಕ್ಕಿ, ಮಲ್ಲಪ್ಪ ಮದುಗುಣಕಿ, ಮೋಯಿನ್‌ವುದ್ದಿನ್ ಪಾಟೇಲ, ವಿಜಯ ಪಾಟಿಲ ಮಾತನಾಡಿದರು.
ಪ್ರತಿಭಟನಾ ಸ್ಥಳಕ್ಕೆ ಬುಧವಾರ ಸಂಜೆ ಆಗಮಿಸಿದ ಜಿಲ್ಲಾ ನಗರಾಭಿವೃದ್ಧಿಕೋಶ ಸಹ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ಜೆ. ಸೊಂಡುರೆ ಪ್ರತಿಭಟನಾಕಾರರ ಬೇಡಿಕೆ ಆಲಿಸಿ, ಸದ್ಯ ಪುರಸಭೆ ಮುಖ್ಯಾಧಿಕಾರಿ ವರ್ಗಾವಣೆಗೊಂಡಿದ್ದಾರೆ. ಮತ್ತು ಹೊಸ ಅಭಿಯಂತರನ್ನು ನೇಮಕವಾದರೂ ಇನ್ನೂ ಕರ್ತವ್ಯಕ್ಕೆ ಹಾಜರಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.
ಆದರೆ ಪ್ರತಿಭಟನಾಕಾರು ಜಿಲ್ಲಾಧಿಕಾರಿ ಅಥವಾ ಪುರಸಭೆ ಆಡಳಿತಾಧಿಕಾರಿಗಳಾದ ಬೈಲಹೊಂಗಲ ಉಪ ವಿಭಾಗ ಅಧಿಕಾರಿಗಳು ಎಲ್ಲ ವಾರ್ಡ್‌ಗಳಿಗೆ ಸಮಾನ ಕಾಮಗಾರಿ ಕೈಗೊಳ್ಳುವ ಕ್ರಿಯಾಯೋಜನೆ ಸಿದ್ಧಪಡಿಸುವುದಾಗಿ ಲಿಖೀತವಾಗಿ ಬರೆದು ಕೊಡುವವರಿಗೆ ಧರಣಿ ಸತ್ಯಾಗ್ರಹ ಮುಂದುವರಿಸುವುದಾಗಿ ಪಟ್ಟು ಹಿಡಿದರು. ಇದರಿಂದ ಧರಣಿ ಸತ್ಯಾಗ್ರಹ ಗುರುವಾರವೂ ಮುಂದುವರಿಯಿತು. ಗುರುವಾರ ಸಂಜೆಯೊಳಗೆ ಲಿಖೀತ ಭರವಸೆ ನೀಡದಿದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಪುರಸಭೆ ಸದಸ್ಯರಾದ ಪರಪ್ಪ ಮುನ್ಯಾಳ, ಆದಂ ತಾಂಬೋಳಿ, ಪಾರ್ವತವ್ವಾ ಅಥಣಿ, ರೇಣುಕಾ ಹಾದಿಮನಿ, ಶಾಂತವ್ವಾ ಝಂಡೆಕುರುಬರ, ಸತ್ತೆವ್ವ ಅರಮನಿ, ಮಲ್ಲಪ್ಪ ತೇರದಾಳ, ಸಂಜು ಕಮತೆ, ಇರ್ಷಾದ ಇನಾಮದಾರ ಇತರರು ಇದ್ದರು.