Advertisement

ಮೂಡಲಗಿ: ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಸಾವು

09:36 PM May 13, 2022 | Team Udayavani |

ಮೂಡಲಗಿ: ತಾಲೂಕಿನ ಹಳೇಯರಗುದ್ರಿ ಗ್ರಾಮದ ಮಹಿಳೆಯೊಬ್ಬಳು ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

Advertisement

ಮೃತ ಮಹಿಳೆಯು ಹಳೇಯರಗುದ್ರಿ ಗ್ರಾಮದ ಶೇಕವ್ವಾ ರಾಮಪ್ಪ ಚೌರಡ್ಡಿ (55) ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದೆ.

ಕಳೆದ ಎರದು ಮೂರು ವರ್ಷಗಳಿಂದ ವಿದ್ಯುತ್ ಲೈನ್ ಗಳು ಜೋತಾಡುತ್ತಿದ್ದರು ಕೆಇಬಿ ಯವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಕೂಲಿ ಕಾರ್ಮಿಕರು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಕುಲಗೋಡ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಯಾದವಾಡ ಹೆಸ್ಕಾಂ ಅಧಿಕಾರಿಗಳು  ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next