Advertisement

ತುಮಕೂರು ಬಂಡಾಯ ಥಂಡ!ಮುದ್ದಹನುಮೇಗೌಡ, ರಾಜಣ್ಣ ಕಣದಿಂದ ಹಿಂದಕ್ಕೆ

09:58 AM Mar 30, 2019 | Nagendra Trasi |

ತುಮಕೂರು: ತೀವ್ರ ಕುತೂಹಲ ಕೆರಳಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್ ನ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ಶುಕ್ರವಾರ ತಮ್ಮ ನಾಮಪತ್ರವನ್ನು ವಾಪಸ್ ಪಡೆಯುವ ಮೂಲಕ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರ ಹಾದಿ ಸುಗಮವಾದಂತಾಗಿದೆ.

Advertisement

ಮೂಲಗಳ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ತಮ್ಮ ಬೆಂಬಲಿಗರ ಜೊತೆ ಮಾತುಕತೆ ನಡೆಸಿದ ನಂತರ, ತಮ್ಮ ನಾಮಪತ್ರವನ್ನು ರವಿಕುಮಾರ್ ಅವರಲ್ಲಿ ವಾಪಸ್ ಪಡೆಯವಂತೆ ಸೂಚಿಸಿದ್ದರು ಎಂದು ವರದಿ ತಿಳಿಸಿದೆ.

ಅದರಂತೆ ರವಿಕುಮಾರ್ ಅವರು ಮುದ್ದಹನುಮೇಗೌಡರ ನಾಮಪತ್ರ ವಾಪಸ್ ಪಡೆದಿದ್ದರು. ಏತನ್ಮಧ್ಯೆ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೇವೇಗೌಡರ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next