Advertisement

ಲೋಕಸಭೇಲಿ ಪ್ರತಿಧ್ವನಿಸಿದ ‘ಮಹಾದಾಯಿ”, ಬಿಜೆಪಿ ಹೇಳಿಕೆಗೆ ಕೋಲಾಹಲ!

01:25 PM Jan 02, 2018 | Sharanya Alva |

ನವದೆಹಲಿ: ಜನರಿಗೆ ಕುಡಿಯುವ ನೀರು ಪೂರೈಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕ ಜನರು ಧರಣಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹದಾಯಿ ವಿವಾದ ಬಗೆಹರಿಸುವಲ್ಲಿ ಇನ್ನಾದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕೆಂದು ತುಮಕೂರು ಸಂಸದ ಮುದ್ದಹನುಮೇಗೌಡ ಅವರು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು.

Advertisement

ಲೋಕಸಭಾ ಕಲಾಪದಲ್ಲಿ ಸಂಸದ ಮುದ್ದಹನುಮೇಗೌಡ ಅವರು ಮಹದಾಯಿ ವಿಚಾರ ಪ್ರಸ್ತಾಪಿಸಿ, ದಕ್ಷಿಣ ಕರ್ನಾಟಕ ಭಾಗದಲ್ಲಿ ಮೇಕೆದಾಟು ಯೋಜನೆಯ ಜಾರಿ ಅಗತ್ಯವಾಗಿದೆ, ಮಹದಾಯಿ ಸೇರಿದಂತೆ ಎರಡೂ ಯೋಜನೆಗಳ ಜಾರಿಗೆ ಪ್ರಧಾನಿ ಮಧ್ಯಪ್ರವೇಶ ಅಗತ್ಯ ಎಂದರು.

ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯವನ್ನು ಬಿಟ್ಟು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಕೈಜೋಡಿಸಬೇಕೆಂದು ವಿನಂತಿಸಿಕೊಂಡರು.

ಅನಂತ ಕುಮಾರ್ ಸಮಜಾಯಿಷಿಗೆ ಕೋಲಾಹಲ!

ಮದಹಾಯಿ ಕುರಿತಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಮಹದಾಯಿಗೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರ್ರೀಕರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಅದರಂತೆ ಕರ್ನಾಟಕಕ್ಕೆ 7.35ಟಿಎಂಸಿ ನೀರು ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಮಜಾಯಿಷಿ ನೀಡಿದ್ದರು.

Advertisement

ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸಂಸದರ ನಡುವೆ ವಾಗ್ವಾದ, ಕೋಲಾಹಲ ನಡೆಯಿತು. ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next