Advertisement
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮಾಸ್ಕ್ ಧರಿಸಿ ಮತ್ತು ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದರು. ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ, ನಾಲ್ಕು ಚಕ್ರದ ವಾಹನದಲ್ಲಿ ಚಾಲಕ ಸೇರಿ ಮೂವರಿಗೆ ಮಾತ್ರ ಅವಕಾಶವಿದೆ. ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಕುವುದು ಅನಿವಾರ್ಯವಾಗಲಿದೆ. ನಿಯಮ ಪಾಲಿಸಿ ಪೊಲೀಸರ ಜತೆ ಸಹಕರಿಸಿ ಎಂದು ವಿನಂತಿಸಿದರು. ಇದೇ ಕೆಲವರಿಗೆ ಲಾಠಿ ರುಚಿ ತೋರಿಸಿದರು.
ಈ ಮಧ್ಯೆ ಸ್ಥಳೀಯ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಗೋಪಾಲ ಕಾಸೆ ನೇತೃತ್ವದಲ್ಲಿ ಪಟ್ಟಣದ ವಿವಿಧೆಡೆ ಸಂಚರಿಸಿ ಲಾಕಡೌನ್ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರಿಸಿದೆ. ಮೇ 4ರಿಂದ ಶುಕ್ರವಾರ ಸಂಜೆಯವರೆಗೆ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ 40000 ರೂ. ದಂಡ ವಿಧಿಸಿ, ಮೊತ್ತವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದೆ.