Advertisement

Muddebihal; ಎರಡು ಬೈಕ್ ಗಳ ಢಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

10:49 PM Jun 30, 2023 | Team Udayavani |

ಮುದ್ದೇಬಿಹಾಳ: ಎರಡು ಬೈಕ್ ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಲತವಾಡ ರಸ್ತೆಯ ಕವಡಿಮಟ್ಟಿ ಗ್ರಾಮದ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ.

Advertisement

ಅಪಘಾತದಲ್ಲಿ ಇನ್ನೋರ್ವ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ನಾಲತವಾಡದ ನಿವಾಸಿಗಳಾದ ಶೇಖರ ತಾಳಿಕೋಟಿ (38) ಮತ್ತು ಸಂಗಮೇಶ ಪೂಜಾರಿ (35) ಎಂದು ಗುರುತಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಮುದ್ದೇಬಿಹಾಳದ ಕಿಶನ್ ತಡಸದ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next