Advertisement

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

12:23 PM Apr 27, 2024 | Kavyashree |

ಮುದ್ದೇಬಿಹಾಳ: ಗಂಡನೊಬ್ಬ ಕುಡಿತದ ನಶೆಯಲ್ಲಿ ಹೆಂಡತಿಯೊಂದಿಗೆ ಜಗಳವಾಡಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಇಲ್ಲಿನ ಇಂದಿರಾ ವೃತ್ತದಲ್ಲಿರುವ ಬನಶಂಕರಿ ನಗರದ ಬಳಿ ನಡೆದಿದೆ.

Advertisement

ಕಾಳಗಿ ಗ್ರಾಮದ ಸಿದ್ದಪ್ಪ ಕಾಳಗಿ ಪತ್ನಿಗೆ ಚೂರಿ ಇರಿದು ಪರಾರಿಯಾದ ಗಂಡ. ಈತನಿಗಾಗಿ ಇಲ್ಲಿನ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಚಾಕು ಇರಿತಕ್ಕೊಳಗಾದ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next