Advertisement

ನರೇಗಾ ಸಮರ್ಪಕ ಜಾರಿ ಆಗಲಿ

03:24 PM May 10, 2020 | Naveen |

ಮುದ್ದೇಬಿಹಾಳ: ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಕೃಷಿ ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಇಂಥವರಿಗೆ ನೆರವಾಗಲು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ ಹೇಳಿದರು.

Advertisement

ತಾಲೂಕಿನ ಕಾಳಗಿ ಗ್ರಾಮ ಪಂಚಾಯತಿಯಲ್ಲಿ ನಡೆದ ಕೋವಿಡ್ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ಜನರನ್ನು ಕೋವಿಡ್ ಸಾಂಕ್ರಾಮಿಕ ರೋಗದಿಂದ ದೂರ ಇರಿಸಲು ಆಶಾ, ಆರೋಗ್ಯ ಕಾರ್ಯಕರ್ತರು, ಪಂಚಾಯಿತಿ ಸಿಬ್ಬಂದಿ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ಜನ ಗೌರವಿಸಬೇಕು ಎಂದರು. ಬೇರೆ ರಾಜ್ಯಗಳಿಂದ ಮರಳಿ ಬರುತ್ತಿರುವ ವಲಸೆ ಕಾರ್ಮಿಕರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡ ಬೇಕು. ಇದಕ್ಕಾಗಿ ಸ್ಥಳೀಯ ಸರ್ಕಾರಿ ಶಾಲೆಗಳನ್ನು ಬಳಸಿಕೊಳ್ಳಬೇಕು. ಇಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಪಂಚಾಯಿತಿ ಸಿಬ್ಬಂದಿ ಒದಗಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಮಹತ್ವ ತಿಳಿಸಿಕೊಡಬೇಕು ಎಂದು ಸಲಹೆ ನೀಡಿದರು.

ತಾಪಂ ಇಒ ಶಶಿಕಾಂತ ಶಿವಪುರೆ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ಕಾಳಗಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ರಂಗನಾಥ ವೈದ್ಯ, ಗ್ರಾಪಂ ಅಧ್ಯಕ್ಷ ಜಾವೇದ್‌ ಇನಾಮದಾರ, ಪಿಡಿಒ ಖೂಬಾಸಿಂಗ್‌ ಜಾಧವ, ಗ್ರಾಪಂ ಸದಸ್ಯರು ಇತರರು ಇದ್ದರು. ಇದಕ್ಕೂ ಮುನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಚ್ಚುಕಟ್ಟುತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next