Advertisement

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

08:14 PM Sep 16, 2024 | Team Udayavani |

ಮುಧೋಳ: ಸಮಾಜ ಹಾಗೂ ಧರ್ಮಗಳನ್ನು ಒಡೆಯುವಲ್ಲಿ ನಿರತವಾಗಿರುವ ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕವಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಆರ್‌ಎಸ್‌ಎಸ್‌ನ್ನು ದೂರವಿಡದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಜನರಿಂದ ಆಯ್ಕೆಯಾಗದ ಬಿ.ಎಲ್‌.ಸಂತೋಷ ಬಿಜೆಪಿಯನ್ನು ನಿಯಂತ್ರಿಸುತ್ತಾರೆ.

ಚುನಾವಣೆಯಲ್ಲಿ ಆಯ್ಕೆಯಾಗದ ಆರ್‌ಎಸ್‌ಎಸ್‌ ಮುಖಂಡರು ಹಿಂಬಾಗಿಲಿನಿಂದ ಆಡಳಿತ ನಡೆಸುತ್ತ ದೇಶದ ಪ್ರಧಾನಿಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುನಿರತ್ನ ದಲಿತರ ಬಗ್ಗೆ ನೀಡುವ ಹೇಳಿಕೆ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಸರ್ಕಾರ ಅಸ್ಥಿರಗೊಳಿಸುವ ಹುನ್ನಾರವನ್ನು ಬಿಜೆಪಿ ವ್ಯವಸ್ಥಿತವಾಗಿ ನಡೆಸುತ್ತಿದೆ.

ರಾಜ್ಯ ಸರ್ಕಾರದ ವಿರುದ್ದ ಮಾತನಾಡಲು ಯತ್ನಾಳರನ್ನು ಮುಂದೆ ಬಿಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next