Advertisement

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

02:47 PM Jun 24, 2024 | Team Udayavani |

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ.

Advertisement

ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಇದನ್ನೂ ಓದಿ: Revanna Case; ಮಾನಗೇಡಿ ಕೆಲಸ ಮಾಡಿ ಅಂತ ನಾವು ಹೇಳಿದ್ವಾ?: ಸಚಿವ ತಿಮ್ಮಾಪುರ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next