Advertisement

Mudhol: ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವ ಕೇಂದ್ರ ಸರ್ಕಾರ: ಸಚಿವ ತಿಮ್ಮಾಪೂರ

01:55 PM Aug 17, 2024 | Team Udayavani |

ಮುಧೋಳ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.

Advertisement

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಇಂತಹ ಪಿತೂರಿಗಳನ್ನು ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷಕ್ಕೆ ಮತ್ತು 136 ಶಾಸಕರನ್ನು ಆಯ್ಕೆ ಮಾಡಿದ ಜನತೆಗೆ ಇದೆ ಹೇಳಿದರು.

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ರಾಜೀನಾಮೆ ನೀಡದಂತೆ ರಾಜ್ಯದ ಜನರು ಹಾಗೂ ನಾವುಗಳು ಅವರನ್ನು ಬಿಡುವುದಿಲ್ಲ ಎಂದು
ತಿಳಿಸಿದ್ದಾರೆ.

ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.

Advertisement

ಇತರ ರಾಜ್ಯಗಳಲ್ಲಿ ಇದೇ ರೀತಿಯ ಅಧಿಕಾರ ದುರುಪಯೋಗದ ಉದಾಹರಣೆಗಳನ್ನು ಉಲ್ಲೇಖಿಸಿ ಇಡಿ, ಐಟಿ ಮತ್ತು ರಾಜಭವನ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವನ್ನು ಸಾರಾಸಗಟಾಗಿ ತಿರಸ್ಕರಿಸಿದ ಸಚಿವ ಆರ್ ಬಿ ತಿಮ್ಮಾಪೂರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ… ರಾಯನ ಕೆರೆಗೆ ಬರಬೇಕಾದ ಅಪಾರ ಪ್ರಮಾಣದ ನೀರು ವ್ಯರ್ಥ

Advertisement

Udayavani is now on Telegram. Click here to join our channel and stay updated with the latest news.

Next