Advertisement
ಈ ಬಗ್ಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಜತೆ ತಹಶೀಲ್ದಾರ್ ರಮೇಶ್ ಅವರಿಗೆ ಮನವಿ ಸಲ್ಲಿಸಿದ ನಂತರ ಮಾಹಿತಿ ನೀಡಿದರು. ಈ ಬಾರಿ ಮಲೆನಾಡಿನಲ್ಲಿ ಬಿದ್ದ ರಣಭೀಕರ ಮಳೆಯಿಂದಾಗಿ ತಾಲೂಕಿನಾದ್ಯಂತ ಜಮೀನುಗಳಲ್ಲಿ ನೀರು ಹರಿದು ಮರಳು ಶೇಖರಣೆಗೊಂಡಿದೆ. ಇದರಿಂದ ವ್ಯವಸಾಯ ಕಷ್ಟಕರವಾಗಿದೆ. ಹಲವೆಡೆ ಗುಡ್ಡ ಕುಸಿತ, ಕೆರೆಕಟ್ಟೆ ಒಡೆದು ತೋಟ ಮತ್ತು ಗದ್ದೆಗಳಿಗೆ ನೀರು ಹರಿದಿದೆ. ನೀರಿನ ರಭಸಕ್ಕೆ ಜಮೀನುಗಳಲ್ಲಿ ಮರಳು ಶೇಖರಣೆಯಾಗಿದೆ. ಇದರಿಂದ ಜಮೀನುಗಳಲ್ಲಿ ಕೃಷಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಮರಳು ತೆರವುಗೊಳಿಸಲು ನಿಯಮಗಳು ಅಡ್ಡಿಯಾಗುತ್ತಿವೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಹಾಗಾಗಿ, ಜಿಲ್ಲಾಧಿಕಾರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸಮಸ್ಯೆ ಪರಿಹರಿಸುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದ್ದರು.
Related Articles
Advertisement
ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕ ರೈತರು ತಮ್ಮ ಜಮೀನುಗಳಲ್ಲಿ ಶೇಖರಣೆಯಾಗಿರುವ ಮರಳನ್ನು ಮಾರಾಟ ಮಾಡದೆ ತಮ್ಮ ಸ್ವಂತಕ್ಕೆ ಮಾತ್ರ ಬಳಸಿಕೊಳ್ಳಬೇಕು. ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಮಾತ್ರ ಮರಳು ಸಾಗಣೆ ಮಾಡಿಕೊಳ್ಳಬೇಕೆಂದು ಷರತ್ತು ಬದ್ಧ ಒಪ್ಪಿಗೆ ನೀಡಿದ್ದಾರೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಘು ಅವರು ಮನವಿ ಮಾಡಿದ್ದಾರೆ.