Advertisement

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

06:41 PM Oct 14, 2024 | Team Udayavani |

ಮೂಡಿಗೆರೆ: ಚಾಲಕ ನಿಯಂತ್ರಣ ತಪ್ಪಿ ಜೀಪ್ ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಜೀಪ್ ನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಿಗೆ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next