Advertisement

ವಿ.ಪ. ಸದಸ್ಯರಿಗೆ ಕೋವಿಡ್ : ಹಲವರಿಗೆ ಹೋಂ ಕ್ವಾರಂಟೈನ್‌

12:14 PM Jul 09, 2020 | Naveen |

ಮೂಡಿಗೆರೆ: ವಿಧಾನ ಪರಿಷತ್‌ ಸದಸ್ಯ, ಅವರ ಕುಟುಂಬಸ್ಥರು ಹಾಗೂ ಕಾರಿನ ಡ್ರೈವರ್‌ ಸೇರಿದಂತೆ ನಾಲ್ವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪತ್ರಕರ್ತರು ಸೇರಿದಂತೆ ಮೂಡಿಗೆರೆ ತಾಪಂ ನೌಕರರನ್ನು 15 ದಿನಗಳ ಕಾಲ ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ.

Advertisement

ಜೂ.29 ರಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮೂಡಿಗೆರೆಯ ತಾಪಂ ಆವರಣದಲ್ಲಿರುವ ಪೂರ್ಣಚಂದ್ರ ತೇಜಸ್ವಿ ಸಭಾಂಗಣದಲ್ಲಿ ತ್ತೈಮಾಸಿಕ ಕೆಡಿಪಿ ಸಭೆ ನಡೆಸಲಾಗಿತ್ತು. ಇದಾದ ನಂತರ ಬೆಂಗಳೂರಿಗೆ ಹೋಗಿ ಬಂದಿದ್ದ ವಿಧಾನ ಪರಿಷತ್‌ ಸದಸ್ಯರಿಗೆ ಕೋವಿಡ್ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭಾನುವಾರ ಚಿಕ್ಕಮಗಳೂರಿನ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದಿನ ಕೆಡಿಪಿ ಸಭೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಲಾಕ್‌ಡೌನ್‌ ಅವಧಿಯಲ್ಲಿ ನಡೆಸಿದ ಮೂಡಿಗೆರೆ ಪ್ರವಾಸದ ನಡುವೆ ಪರಿಷತ್‌ ಸದಸ್ಯರು ನೇರವಾಗಿ ಪಾಲ್ಗೊಂಡಿದ್ದರಿಂದ ಹಲವರಿಗೆ ಸೋಕು ತಗುಲಿರಬಹುದು ಎಂದು ಶಂಕಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಕೆಡಿಪಿ ಸಭೆ ಹಾಗು ಪ್ರವಾಸದಲ್ಲಿ ಪಾಲ್ಗೊಂಡ ಎಲ್ಲರನ್ನೂ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದ ಹಿನ್ನೆಲೆಯಲ್ಲಿ ಹಲವರಿಗೆ ಹೋಂ ಕ್ವಾರಂಟೈನ್‌ ಮಾಡುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಿರತರಾಗಿದ್ದಾರೆ.

200 ಕ್ಕೂ ಹೆಚ್ಚು ಜನರ ಹೋಂ ಕ್ವಾರಂಟೈನ್ ‌ ಅವಶ್ಯಕತೆ ಇದೆ ಪ್ರಸ್ತುತ ನಡೆಯಲಾಗಿದೆ ಎನ್ನಲಾದ ತಾಪಂ ಕೆಡಿಪಿ ಸಭೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ತಾಲೂಕು ಪ್ರವಾಸದಲ್ಲಿ ಮೂಡಿಗೆರೆ ಶಾಸಕರು, ತಾಪಂ ಕಾರ್ಯ ನಿರ್ವಹಣಾ ಅಧಿಕಾರಿ, ತಹಶೀಲ್ದಾರ್‌, ಜಿಪಂ ಹಾಗೂ ತಾಪಂ ಸದಸ್ಯರು, ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು, ಪತ್ರಕರ್ತರು ಸೇರಿದಂತೆ 200 ಕ್ಕೂ ಹೆಚ್ಚು ಜನರ ಮೇಲೆ ನಿಗಾ ವಹಿಸುವ ಹೊಣೆಗಾರಿಗೆ ಆರೋಗ್ಯ ಇಲಾಖೆಯ ಮೇಲಿದೆ.

ಪತ್ರಕರ್ತರಿಗೆ ರಕ್ಷಣೆ ಇಲ್ಲ
ಪತ್ರಕರ್ತರಿಗೆ ಕೋವಿಡ್‌ ವಿರುದ್ಧ ಯಾವುದೇ ರಕ್ಷಣೆ ನೀಡಲಾಗುತ್ತಿಲ್ಲ ಎಂದು ಕರ್ನಾಟಕ ಜರ್ನಲಿಸ್ಟ ಯೂನಿಯನ್‌ ರಾಜ್ಯ ಕಾರ್ಯದರ್ಶಿ ಕೆಸವಳಲು ರಾಘವೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿ ಧಿಗಳಿಗೆ ಸೋಂಕು ತಗುಲಿದರೆ ಸರ್ಕಾರ ಅವರ ಚಿಕಿತ್ಸಾ ವೆಚ್ಚವನ್ನು ನೋಡಿಕೊಳ್ಳುತ್ತದೆ. ಆದರೆ ತಮ್ಮ ವೃತ್ತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತಿರುವ ಜೀವಕ್ಕೆ ಯಾವುದೇ ರಕ್ಚಣೆ ಇಲ್ಲದಂತಾಗಿದೆ. ಪತ್ರಕರ್ತರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದರ ಜೊತೆಗೆ ಹೋಂ ಕ್ವಾರಂಟೈನ್‌ ಅವಧಿಯಲ್ಲಿ ಪತ್ರಕರ್ತರ ಜೀವನ ನಿರ್ವಹಣೆಗೆ ಅವಶ್ಯವಿರುವ ಎಲ್ಲಾ ಸಾಮಗ್ರಿಗಳನ್ನು ಉಚಿತವಾಗಿ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ವಿಧಾನ ಪರಿಷತ್‌ ಸದಸ್ಯರ ಕಚೇರಿ ಕೂಡ ತಾಪಂ ಆವರಣದಲ್ಲಿ ಇರುವುದರಿಂದ ತಾಪಂ ಅನ್ನು ಸೀಲ್‌ಡೌನ್‌ ಮಾಡುವ ಸಾಧ್ಯತೆ ದಟ್ಟವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next