Advertisement

ಮೂಡಿಗೆರೆ: ಪುತ್ತೂರಿನ ಪ್ರವಾಸಿಗರ ಕಾರು ಪಲ್ಟಿ

11:41 AM Jul 24, 2022 | Team Udayavani |

ಮೂಡಿಗೆರೆ: ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದ ಪ್ರವಾಸಿಗರ ಕಾರೊಂದು ಚಾಕಲನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ಭಾನುವಾರ ನಡೆದಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಆಗಮಿಸಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ. ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಭಾನಾಪೂರ ಅಪಘಾತ: ಮೃತರ ಕುಟುಂಬಿಕರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next