Advertisement

Mudigere: ಭ್ರಷ್ಟಾಚಾರ ಕಂಡು ಬಂದಲ್ಲಿ ಸೂಕ್ತ ಸಂಸ್ಥೆಗೆ ಮಾಹಿತಿ ನೀಡಿ: ಮಲ್ಲಿಕಾರ್ಜುನ್   

03:16 PM Oct 29, 2024 | Team Udayavani |

ಮೂಡಿಗೆರೆ: ಭ್ರಷ್ಟಾಚಾರ ದೇಶದ ಅತಿ ದೊಡ್ಡ ಪಿಡುಗಾಗಿದ್ದು ಇದನ್ನು ನಿರ್ಮೂಲನೆ ಮಾಡುವ ಮೂಲಕ ದೇಶವನ್ನು ಅಭಿವೃದ್ಧಿ ಪದದತ್ತ ಮುನ್ನಡೆಸೋಣ ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಲ್ಲಿಕಾರ್ಜುನ್ ತಿಳಿಸಿದರು.

Advertisement

ಅವರು ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಇಲ್ಲಿನ ಸಿಬ್ಬಂದಿ ವರ್ಗಕ್ಕೆ ಪ್ರಮಾಣವಚನ ಬೋಧಿಸಿ ಮಾತನಾಡಿದರು.

ನಮ್ಮ ದೇಶದ ಆರ್ಥಿಕ ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಒಂದು ಪ್ರಮುಖ ಅಡಚಣೆಯಾಗಿದ್ದು, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ ನಾಗರಿಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು.

ಪ್ರತಿ ನಾಗರಿಕನು ಜಾಗರೂಕತನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿಯು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಬೆಂಬಲಿಸಬೇಕು ಎಂದು ಹೇಳಿದರು.

Advertisement

ಜೀವನದ ಎಲ್ಲಾ ಕ್ಷೇತ್ರದಲ್ಲಿ ಕಾನೂನಿಗೆ ಗೌರವ ನೀಡಬೇಕು. ಲಂಚ ಪಡೆಯುವುದಿಲ್ಲ ಹಾಗೂ ನೀಡುವುದಿಲ್ಲ. ಅದರ ಜೊತೆಗೆ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುತ್ತೇನೆ. ಅಲ್ಲದೆ ಯಾವುದೇ ಭ್ರಷ್ಟಾಚಾರವನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಪ್ರಮಾಣ ವಚನ ಬೋಧಿಸಿದರು.

ಈ ವೇಳೆ ಲೋಕಾಯುಕ್ತ  ಸಿಬ್ಬಂದಿಗಳಾದ ಪ್ರಸಾದ್ ಎಂ. ಹಾಗೂ ರವಿಚಂದ್ರ, ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next