ಕೊಟ್ಟಿಗೆಹಾರ : ಪಿಕ್ನಿಕ್ ಗೆ ಬಂದಿದ್ದ ಕಾಲೇಜು ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾಲೇಜ್ ವಾಹನ ಪಲ್ಟಿಯಾಗಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ಹತ್ತು ವಿದ್ಯಾರ್ಥಿಗಳು ದೇವರಮನೆ ಗುಡ್ಡಕ್ಕೆ ಪಿಕ್ನಿಕ್ ಹೋಗಿದ್ದರು. ಗಾಯಗೊಂಡ ಐವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಎಲ್ಲ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.