Advertisement
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ದೇಶದಲ್ಲಿ ಮೊದಲ ಸ್ಥಾನ ಪಡೆಯಲು ಸಾಧ್ಯವಾಗಿದೆ. ಪ್ರಸ್ತುತ ಕಿತ್ತೂರಿನಲ್ಲಿ ಜಾಂಬೂರಿ ನಡೆಸಲಾಗಿದ್ದು, ಯಾದಗಿರಿ ಹಾಗೂ ಧಾರವಾಡಗಳಲ್ಲಿ ಸಾಂಸ್ಕೃತಿಕ ಜಾಂಬೂರಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಒಂದು ಲಕ್ಷ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ ಎಂದರು.
2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ಕೊಡಮಾಡುವ ಮೆಸ್ಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್ ಪ್ರಕಟಗೊಂಡಿದ್ದು, ಕರ್ನಾಟಕದ 8 ಜನರಿಗೆ ಈ ಪ್ರಶಸ್ತಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ 3 ಅಭ್ಯರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಯಸ್ಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಮತ್ತು ಯುವ ವಿಭಾಗದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರೋವರ್ ಸ್ಕೌಟ್ಸ್ ಲೀಡರ್ ಚಂದ್ರಾಕ್ಷ ಅವರಿಗೆ ಪ್ರಶಸ್ತಿ ಲಭಿಸಿದೆ ಎಂದರು. ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ರಾಜ್ಯ ಸಂಘಟನ ಆಯುಕ್ತ ಎಂ. ಪ್ರಭಾಕರ್ ಭಟ್, ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜುಜಾರೆ, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್‌ಚಂದ್ರ ಉಪಸ್ಥಿತರಿದ್ದರು.
Related Articles
ಭಾರತ್ ಸ್ಕೌಟ್ಸ್ ಮತ್ತು ಗೆ„ಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರೂ ಆಗಿರುವ ಡಾ|ಎಂ.ಮೋಹನ ಆಳ್ವ ಮಾತನಾಡಿ, ಸ್ಕೌಟ್ಸ್ ಮತ್ತು ಗೆ„ಡ್ಸ್ ಗೆ ಸಂಬಂಧಿಸಿದಂತೆ ಶಿಕ್ಷಕರಿಗೆ ತರಬೇತಿ ನೀಡಲು ಮಂಗಳೂರಿನ ಪಿಲಿಕುಳದಲ್ಲಿ ಸುಮಾರು 12 ಕೋ. ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ಸ್ಕೌಟ್ಸ್ ಗೆ„ಡ್ಸ್ ಭವನ ನಿರ್ಮಿಸಲಾಗಿದೆ. 10 ಕೋ.ರೂ.ನ ಕಾಮಗಾರಿ ನಡೆದಿದ್ದು ಮುಂದಿನ ಜನವರಿ ತಿಂಗಳಲ್ಲಿ ಲೋಕರ್ಪಣೆಗೊಳ್ಳಲಿದೆ ಎಂದರು.
Advertisement