Advertisement

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

09:59 PM Jun 12, 2024 | sudhir |

ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಅಧ್ಯಕ್ಷರನ್ನಾಗಿ ಮಹಮ್ಮದ್ ಅಸ್ಗರ್ (ಮುನ್ನಾ) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Advertisement

ಮಹಮ್ಮದ್ ಅಸ್ಗರ್ ಮುನ್ನಾ ಅವರು ಪ್ರಸ್ತುತ ಚಾ.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 2001 ರಿಂದ 2007 ಹಾಗೂ 2007 ರಿಂದ 2013 ರವರೆಗೆ ಎರಡು ಬಾರಿ ರಲ್ಲಿ ನಗರಸಭೆ ಸದಸ್ಯರಾಗಿದ್ದರು. ಜಿಲ್ಲಾ ಕೆಡಿಪಿ ಸದಸ್ಯರಾಗಿದ್ದರು. ನಗರದ ಗಾಳಿಪುರ ಬಡಾವಣೆ 3ನೇ ವಾರ್ಡಿನ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರು ಮಾಡಿದ್ದ ಅಭಿವೃದ್ಧಿ ಕೆಲಸಗಳಿಂದಾಗಿ ಉತ್ತಮ ನಗರಸಭಾ ಸದಸ್ಯ ಎಂಬ ಹೆಸರು ಪಡೆದಿದ್ದರು. ಸೌಲಭ್ಯ ವಂಚಿತ ಬಡಾವಣೆಯಾಗಿದ್ದ ಗಾಳಿಪುರದಲ್ಲಿ ಎಲ್ಲ ಕಡೆಗೂ ಡಾಂಬರು ರಸ್ತೆ, ಚರಂಡಿ, ಬೀದಿದೀಪ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಿ ಮಾದರಿ ವಾರ್ಡ್ ಮಾಡಿದ್ದರು.

ಮುನ್ನಾ ಕಳೆದ 8 ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪಕ್ಷಕ್ಕೆ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಅವರಿಗೆ ಚುಡಾ ಅಧ್ಯಕ್ಷ ಸ್ಥಾನ ನೀಡಿದೆ.

ಚುಡಾ ಅಧ್ಯಕ್ಷರಾಗಿ ನೇಮಕವಾಗಿರುವ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ದೊಡ್ಡ ಜವಾಬ್ದಾರಿಯ ಸ್ಥಾನ ನೀಡಿದೆ. ಇದಕ್ಕಾಗಿ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ಪಕ್ಷದ ಎಲ್ಲ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾವುದೇ ಲೋಪದೋಷಗಳಿಗೆ ಎಡೆ ಮಾಡಿಕೊಡದೇ ನಗರದ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಇದನ್ನೂ ಓದಿ: Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Advertisement
Advertisement

Udayavani is now on Telegram. Click here to join our channel and stay updated with the latest news.

Next