ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಮತ್ತು ಪತ್ನಿ ನೀತಾ ಅಂಬಾನಿ ಅವರು ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮೊಮ್ಮಗನ ಜತೆ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Gopalaswamy Hill: ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನ: ಆಕ್ರೋಶ
ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಮಂಗಳವಾರ ಮೊಮ್ಮಗ ಪ್ರಥ್ವಿ ಅಂಬಾನಿ ಜತೆ ರಾಷ್ಟ್ರಧ್ವಜವನ್ನು ಹಿಡಿದು ಸ್ವಾತಂತ್ರ್ಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ದಂಪತಿ ಪುತ್ರ ಪ್ರಥ್ವಿ ಅಂಬಾನಿ. ಪುಟಾಣಿ ಮೊಮ್ಮಗನ ಜತೆ ಅಂಬಾನಿ ದಂಪತಿ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡಿದ್ದಾರೆ.