ಲಕ್ನೋ:ಉತ್ತರಪ್ರದೇಶದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡುವವರ ಸಂಖ್ಯೆ ಮುಂದುವರಿದಿದ್ದು, ಗುರುವಾರ (ಜನವರಿ 13) ಶಾಸಕ ಮುಖೇಶ್ ವರ್ಮಾ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಳೆದ ಮೂರು ದಿನಗಳಲ್ಲಿ ಬಿಜೆಪಿಗೆ ಏಳು ಶಾಸಕರು ರಾಜೀನಾಮೆ ನೀಡಿದಂತಾಗಿದೆ.
ಇದನ್ನೂ ಓದಿ:ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಸ್ಥಗಿತ: ಕೈ ನಾಯಕರ ಮಹತ್ವದ ನಿರ್ಧಾರ
ಮುಖೇಶ್ ವರ್ಮಾ ಫಿರೋಜಾಬಾದ್ ನ ಶಿಕೋಹಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ದಲಿತರು ಹಾಗೂ ಹಿಂದುಳಿದ ವರ್ಗದವರನ್ನು ಕಡೆಗಣಿಸುತ್ತಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರದ ಐದು ವರ್ಷಗಳ ಆಡಳಿತಾವಧಿಯಲ್ಲಿ ದಲಿತರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ನಿರ್ಲಕ್ಷಿಸಿದ್ದು, ಇದರಿಂದ ಬೇಸತ್ತು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ವರ್ಮಾ ತಿಳಿಸಿದ್ದಾರೆ.
Related Articles
ಭಾರತೀಯ ಜನತಾ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ತತ್ವವನ್ನು ಗಾಳಿಗೆ ತೂರಿ, ತಮ್ಮದೇ ಸ್ವ ಹಿತಾಸಕ್ತಿಯನ್ನು ಹೇರುತ್ತಿರುವುದಾಗಿ ವರ್ಮಾ ದೂರಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ನಮ್ಮ ನಾಯಕರು, ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾವು ಅದನ್ನು ಬೆಂಬಲಿಸುತ್ತೇವೆ ಎಂದು ವರ್ಮಾ ಹೇಳಿದರು.