Advertisement

ಜೈಲರ್ ಗೆ ಬೆದರಿಕೆ; ಬಿಎಸ್ಪಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಗೆ 2 ವರ್ಷ ಜೈಲುಶಿಕ್ಷೆ

03:39 PM Sep 21, 2022 | Team Udayavani |

ಲಕ್ನೋ:ಜೈಲರ್ ಹಣೆಗೆ ಪಿಸ್ತೂಲ್ ಹಿಡಿದು ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ಪಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯನ್ನು ದೋಷಿ ಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ, ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.

Advertisement

ಇದನ್ನೂ ಓದಿ:ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಕಾರಜೋಳ

ಪ್ರಕರಣದ ಕುರಿತು ಉತ್ತರಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಏಕಸದಸ್ಯ ಪೀಠದ ಜಸ್ಟೀಸ್ ದಿನೇಶ್ ಕುಮಾರ್ ಸಿಂಗ್ ಈ ಆದೇಶ ನೀಡಿದ್ದಾರೆ.

2003ರಲ್ಲಿ ಜೈಲರ್ ಎಸ್ ಕೆ ಅವಾಸ್ಥಿ ಅವರು ಮುಖ್ತಾರ್ ಅನ್ಸಾರಿ ವಿರುದ್ಧ ಅಲಾಂಬಾಗ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದರು. ಜೈಲಿನಲ್ಲಿದ್ದ ಅನ್ಸಾರಿಯನ್ನು ಭೇಟಿಯಾಗಲು ಬಂದ ಜನರನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ, ತನ್ನ ಹಣೆಗೆ ಪಿಸ್ತೂಲ್ ಗುರಿ ಇಟ್ಟು ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಅನ್ಸಾರಿ ವಿರುದ್ಧದ ಪ್ರಕರಣದಲ್ಲಿ ವಿಚಾರಣಾ ಕೋರ್ಟ್ ಬಿಡುಗಡೆ ಮಾಡಿತ್ತು. ಬಳಿಕ ಉತ್ತರಪ್ರದೇಶ ಸರ್ಕಾರ ವಿಚಾರಣಾ ಕೋರ್ಟ್ ನ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next