ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಂದಾ ಜೈಲಿನಲ್ಲಿರುವ ಮಾಫಿಯಾ ಡಾನ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆದರೆ, ಮುಕ್ತಾರ್ ಅವರ ಆರೋಗ್ಯದ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ಆಡಳಿತ ಮತ್ತು ಜೈಲು ಆಡಳಿತ ಸಂಪೂರ್ಣ ಮೌನ ವಹಿಸಿದೆ. ಎರಡು ದಿನಗಳ ಹಿಂದೆ ಮುಖ್ತಾರ್ ಅನ್ಸಾರಿ ಅವರ ಭದ್ರತಾ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಜೈಲರ್ ಮತ್ತು ಇಬ್ಬರು ಉಪ ಜೈಲರ್‌ಗಳನ್ನು ಅಮಾನತುಗೊಳಿಸಲಾಗಿತ್ತು.
ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಿಂದ ಮುಖ್ತಾರ್ ಮೂತ್ರದ ಸೋಂಕಿನಿಂದ ಬಳಲುತ್ತಿದ್ದರು. ರಾತ್ರಿ 1 ಗಂಟೆಗೆ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆರಂಭಿಕ ಪರೀಕ್ಷೆಯ ನಂತರ ವೈದ್ಯರು ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿದ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು ಎಂದು ಹೇಳಲಾಗಿದೆ.
ಜೈಲಿನಲ್ಲಿ ಸ್ಲೋ ಪಾಯ್ಸನ್ ನೀಡಿರುವುದಾಗಿ ಮುಖ್ತಾರ್ ಆರೋಪ:
ಜೈಲಿನಲ್ಲಿ ತನಗೆ ನೀಡಿರುವ ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡಲಾಗಿತ್ತು ಎಂದು ಮುಖ್ತಾರ್ ಅನ್ಸಾರಿ ಆರೋಪಿಸಿದ್ದಾರೆ.
ಇದನ್ನೂ ಓದಿ: Delhi: ಕೇಜ್ರಿವಾಲ್ ಬಂಧನ ವಿರೋಧಿಸಿ ಇಂದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ… ಬಿಗಿ ಭದ್ರತೆ