Advertisement

ಮೂರು ಪಕ್ಷಗಳಲ್ಲಿ ಪ್ರಾಮಾಣಿಕರೇ ಅಸ್ಪೃಶ್ಯರು: ಎಎಪಿ ಸೇರಿದ ಮುಖ್ಯಮಂತ್ರಿ ಚಂದ್ರು ಹೇಳಿಕೆ

03:37 PM Jun 07, 2022 | Team Udayavani |

ಬೆಂಗಳೂರು: ಖ್ಯಾತ ನಟ, ಮಾಜಿ ಶಾಸಕ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರು ಅವರು ಆಮ್‌ ಆದ್ಮಿ ಪಾರ್ಟಿಗೆ ಮಂಗಳವಾರ ಸೇರ್ಪಡೆಯಾದರು.

Advertisement

ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದಮುಖ್ಯಮಂತ್ರಿ ಚಂದ್ರು “ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ ಎಂದರು.

ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ:ಸಿದ್ದರಾಮಯ್ಯನಷ್ಟು ದಲಿತ ವಿರೋಧಿ ಮತ್ತೂಬ್ಬರಿಲ್ಲ: ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ

Advertisement

ಸೇರ್ಪಡೆ ಸಮಾರಂಭದಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next